ರಾಮನಗರ: ತಾಲ್ಲೂಕಿನ ಕೈಲಾಂಚದಲ್ಲಿ ಬೆಳಿಗ್ಗೆ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ. ಗ್ರಾಮದ ಚಿಕ್ಕಬೋರಯ್ಯ ಗಾಯಾಳು. ಬೆಳಿಗ್ಗೆ 6 ಗಂಟೆ ಸುಮಾರಿಗೆ ಕೊಟ್ಟಿಗೆಯಲ್ಲಿ ಹಾಲು ಕರೆಯಲು ಹೋದಾಗ, ಕೊಟ್ಟಿಗೆಗೆ ನುಗ್ಗಿದ ಕರಡಿ ಏಕಾಏಕಿ ದಾಳಿ ನಡೆಸಿದೆ.
ಘಟನೆಯಲ್ಲಿ ಚಿಕ್ಕಬೋರಯ್ಯ ಅವರ ತಲೆ, ಹೊಟ್ಟೆ ಹಾಗೂ ಕೈಗೆ ಗಾಯವಾಗಿದೆ. ಕೂಡಲೇ ಕುಟುಂಬದವರು ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಲಾಗಿದೆ. ಆಸ್ಪತ್ರೆಗೆ ಡಿಸಿಎಫ್ ರಾಮಕೃಷ್ಣಪ್ಪ ಅವರು ಭೇಟಿ ನೀಡಿ, ರೈತನ ಆರೋಗ್ಯವನ್ನು ವಿಚಾರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.