ಚನ್ನಪಟ್ಟಣ: ತಾಲ್ಲೂಕಿನ ಹರೂರು ಗ್ರಾಮದಲ್ಲಿ ಬುಧವಾರ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಗ್ರಾಮಸ್ಥರು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಮುಖಂಡ ರವಿಶಂಕರ್ ಮಾತನಾಡಿ ‘ಅನಾಥಾಶ್ರಮ, ವೃದ್ಧಾಶ್ರಮ, ಹೆಣ್ಣು ಮಕ್ಕಳ ಶಿಕ್ಷಣ ಸೇರಿದಂತೆ ಸಮಾಜದ ನೊಂದ ವರ್ಗಗಳಿಗೆ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸಹಾಯ ಮಾಡುತ್ತಿದ್ದ ಪುನೀತ್ ನಿಜಜೀವನದಲ್ಲೂ ನಾಯಕರಾಗಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಮೆರೆದು ನಮ್ಮೆಲ್ಲರಿಗೂ ಮಾದರಿ ಆಗಿದ್ದಾರೆ’ ಎಂದು ಬಣ್ಣಿಸಿದರು.
ಇದೇ ಸಂದರ್ಭ ಗ್ರಾಮದ 50ಕ್ಕೂ ಹೆಚ್ಚು ಯುವಕರು ನೇತ್ರದಾನದ ಪ್ರತಿಜ್ಞೆ ಮಾಡಿದರು. ಶಾಲಾ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಪುನೀತ್ ಅವರಿಗೆ ಪ್ರಿಯವಾದ ಮಾಂಸಾಹಾರ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ಮುಖಂಡರಾದ ಡೇರಿ ಶಿವರಾಮು, ಜೈಕುಮಾರ್, ನರಸಿಂಹ, ಅಶ್ವತ್ಥ್, ಬಿಜೆಪಿಯ ಶಿವಣ್ಣ, ರಾಜೇಶ, ಗ್ರಾಮದ ಯುವಕರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.