
ಪ್ರಜಾವಾಣಿ ವಾರ್ತೆಅಪಘಾತ
–ಪ್ರಾತಿನಿಧಿಕ ಚಿತ್ರ
ಚನ್ನಪಟ್ಟಣ: ಪೊಲೀಸ್ ಗಸ್ತು ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್‌ಸ್ಟೆಬಲ್ ಗಾಯಗೊಂಡಿರುವ ಘಟನೆ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ.
ಅಕ್ಕೂರು ಪೊಲೀಸ್ ಠಾಣೆ ಹೆಡ್ ಕಾನ್‌ಸ್ಟೆಬಲ್ ಸೈಯದ್ ನಾಸಿರ್ ಪಾಷ ಗಾಯಗೊಂಡವರು. ಇವರು ಪೊಲೀಸ್ ಗಸ್ತು ವಾಹನದಲ್ಲಿ ಹೆದ್ದಾರಿ ಗಸ್ತಿನಲ್ಲಿ ಇದ್ದ ವೇಳೆ ಲಾರಿಯೊಂದು ಡಿಕ್ಕಿ ಹೊಡೆದಿದೆ. ಗಾಯಾಳುವಿಗೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಈ ಸಂಬಂಧ ನಗರದ ಸಂಚಾರ ಪೊಲೀಸ್ ಠಾಣೆಯಲ್ಲಿ ಲಾರಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.