
ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ ಉಚಿತ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಪಿ.ಎಸ್.ವಿ. ನಗರ್, ರಾಮನಗರ ಟೌನ್, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹೊನ್ನನಾಯಕನಹಳ್ಳಿ, ಚನ್ನಪಟ್ಟಣ ತಾಲ್ಲೂಕು ಹಾಗೂ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಯಲ್ಲಾಪುರ, ಮಾಗಡಿ ತಾಲ್ಲೂಕಿನ ಶಾಲೆಗಳಿಗೆ 6ನೇ ತರಗತಿಗೆ ಉಚಿತ ಪ್ರವೇಶ ಪ್ರಾರಂಭವಾಗಿದೆ.
ಪ್ರವೇಶ ಪಡೆಯಲು ಆಸಕ್ತಿವುಳ್ಳ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಫೆ. 28ರವರೆಗೆ ಅವಧಿ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ರೂಮ್ ನಂ. 308, 2ನೇ ಮಹಡಿ, ಕಂದಾಯ ಭವನ, ಬಿ.ಎಂ. ರಸ್ತೆ, ರಾಮನಗರ-562159. ದೂ.ಸಂಖ್ಯೆ: 080-27271104 ಅಥವಾ ಸೇವಾ ಸಿಂಧು ಪೋರ್ಟಲ್ ಲಿಂಕ್ https://sevasindhuservices.karanataka.gov.in ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.