ಕನಕಪುರ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಕೋಡಿಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಡಿಕೆ ಸಹೋದರರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ತಾಲ್ಲೂಕಿನ ಕೋಡಿಹಳ್ಳಿಯ ಬೆಟ್ಟದ ಹಲಸೂರು ಗ್ರಾಮದ ರವೀಂದ್ರ (44) ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಮನೆಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿರುವ ಬೆಟ್ಟದ ಹಲಸೂರಿನ ಕಾಳೇಗೌಡ ಅಲಿಯಾಸ್ ರಘು ಅವರ ಮಗ ರಕ್ಷಿತ್ ಕುಮಾರ್ ಮೇ 29 ರಂದು ಸಾಮಾಜಿಕ ಜಾಲತಾಣ ವೀಕ್ಷಿಸುವಾಗ ರವೀಂದ್ರ ಅವರು ಲೈವ್ ಬಂದು ಡಿಕೆ ಸಹೋದರರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜಾತಿ ವಿಚಾರವಾಗಿ ಸಮಾಜದಲ್ಲಿ ಶಾಂತಿ ಕದಡುವಂತೆ ಮಾಡಿದ್ದಾರೆ ಎಂದು ಆರೋಪಿಸಿ ರವೀಂದ್ರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋಡಿಹಳ್ಳಿ ಪೊಲೀಸ್ ಠಾಣೆಗೆ ರಕ್ಷಿತ್ ಕುಮಾರ್ ದೂರು ನೀಡಿದ್ದು, ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.