
ಕನಕಪುರ: ತಾಲ್ಲೂಕಿನ ಉಯ್ಯಂಬಳ್ಳಿ ಹೋಬಳಿ ಹೂಕುಂದ ಗ್ರಾಮದಲ್ಲಿ ಭಾನುವಾರ ಎರಡು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಅಪಘಾತದಲ್ಲಿ ಬೈಕ್ ಹಿಂಬದಿ ಸವಾರ, ಕೊರಟಗೆರೆ ಗ್ರಾಮದ ಸುದೀಪ್ (16) ಗಂಭೀರವಾಗಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ನೇಹಿತನ ಬೈಕ್‌ನಲ್ಲಿ ಕೊರಟಗೆರೆ ಗ್ರಾಮದಿಂದ ಕೋಡಿಹಳ್ಳಿ ಕಡೆಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಹಿಂದುಗಡೆ ಕುಳಿತಿದ್ದ ಸುದೀಪ್ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿದ್ದವರು ಉಪಚರಿಸಿ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಕೋಡಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.