ಮಾಗಡಿ: ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದ ಸಿದ್ದರಾಜು, ಜಗದಾಂಬ ದಂಪತಿ ಮಗಳು ದಾಕ್ಷಾಯಿಣಿ (20) ಮೃತರು ಎಂದು ಗುರುತಿಸಲಾಗಿದೆ.
ಆಳ್ವಾಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ದಾಕ್ಷಾಯಿಣಿ ಊರ ಹಬ್ಬ ಮುಗಿಸಿಕೊಂಡು ಮಂಗಳವಾರ ಬೆಳಿಗ್ಗೆ ಕಾಲೇಜಿಗೆಂದು ಕುಣಿಗಲ್‌ಗೆ ತೆರಳುತ್ತಿದ್ದ ವೇಳೆ ತಾಳೇಕೆರೆ ಹ್ಯಾಂಡ್ ಪೋಸ್ಟ್ ಬಳಿಯ ಜಾನ್ಸನ್ ಹತ್ತಿರ ಆಕಸ್ಮಿಕವಾಗಿ ಬೈಕಿನಿಂದ ಬಿದಿದ್ದು, ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ದಾಕ್ಷಾಯಿಣಿ ಮೇಲೆ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕುಣಿಗಲ್ ಸರ್ಕಾರಿ ಆಸ್ಪತ್ರೆ ಶವಗಾರದಲ್ಲಿ ಮರಣೋತ್ತರ ಪರೀಕ್ಷೆಗೆ ಶವ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.