ADVERTISEMENT

ಅತ್ಯಾಚಾರ ಎಸಗಿ ಮೂಕ ಬಾಲಕಿ ಕೊಲೆ ಆರೋಪ: ಮನೆಮುಂದೆ ಶವವಿಟ್ಟು ಕುಟುಂಬದವರ ಆಕ್ರಂದನ

​ಪ್ರಜಾವಾಣಿ ವಾರ್ತೆ
Published 14 ಮೇ 2025, 7:53 IST
Last Updated 14 ಮೇ 2025, 7:53 IST
<div class="paragraphs"><p>ಮಾತು ಬಾರದ ಮತ್ತು ಕಿವಿ ಕೇಳದ ಬಾಲಕಿ ಕೊಲೆ ಖಂಡಿಸಿ, ರಾಮನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಭೇಟಿ ನೀಡಿ, ಪ್ರತಿಭಟನಾಕಾರರ ಅಹವಾಲು ಆಲಿಸಿ ಮನವಿ ಸ್ವೀಕರಿಸಿದರು</p></div>

ಮಾತು ಬಾರದ ಮತ್ತು ಕಿವಿ ಕೇಳದ ಬಾಲಕಿ ಕೊಲೆ ಖಂಡಿಸಿ, ರಾಮನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದ ಪ್ರತಿಭಟನಾ ಸ್ಥಳಕ್ಕೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಭೇಟಿ ನೀಡಿ, ಪ್ರತಿಭಟನಾಕಾರರ ಅಹವಾಲು ಆಲಿಸಿ ಮನವಿ ಸ್ವೀಕರಿಸಿದರು

   

ಬಿಡದಿ: ನನ್ನ ಮಗಳ ಮೇಲೆ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಕ್ರೂರವಾಗಿ ಕೊಲೆ ಮಾಡಲಾಗಿದೆ. ಹಂತಕರನ್ನು ಪೊಲೀಸರು ಬಂಧಿಸುವವರೆಗೆ ಆಕೆಯ ಶವಸಂಸ್ಕಾರ ಮಾಡುವುದಿಲ್ಲ...

ಹೋಬಳಿಯ ಭದ್ರಾಪುರ ಬಳಿಯ ರೈಲ್ವೆ ಹಳಿ ಪಕ್ಕ ಮೂರು‌ ದಿನಗಳ ಹಿಂದೆ ಅರೆ ನಗ್ನಾವಸ್ಥೆಯಲ್ಲಿ ಶವವಾಗಿ ಪತ್ತೆಯಾದ ಮಾತು ಬಾರದ ಮತ್ತು ಕಿವಿ ಕೇಳಿಸದ ಹಕ್ಕಿಪಿಕ್ಕಿ ಸಮುದಾಯದ ಬಾಲಕಿಯ ತಾಯಿ ಹಾಗೂ ಕುಟುಂಬದವರ ಆಕ್ರೋಶ ಮತ್ತು ನೋವಿನ ನುಡಿಗಳಿವು.

ADVERTISEMENT

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ ಅವರು, ಗ್ರಾಮಕ್ಕೆ ಬುಧವಾರ ಭೇಟಿ ನೀಡಿದಾಗ ಕುಟುಂಬದವರು ಮತ್ತು ಗ್ರಾಮಸ್ಥರು ತಮ್ಮ ನೋವು ತೋಡಿಕೊಂಡರು‌.

ತಮ್ಮ ಶೀಟಿನ ಮನೆ ಮುಂದೆ ಮಗಳ ಶವವನ್ನು ಇಟ್ಟುಕೊಂಡು, ಪೊಲೀಸರು ಯಾವಾಗ ಹಂತಕರನ್ನು ಬಂಧಿಸುತ್ತಾರೊ, ಯಾಕಾಗಿ ಪುತ್ರಿಯನ್ನು ಕೊಲೆ ಮಾಡಲಾಗಿದೆ ಎಂಬ ಕಾರಣ ತಿಳಿಯಲು ಅನ್ನ, ನೀರು ಹಾಗೂ ನಿದ್ರೆ ಬಿಟ್ಟು ಕುಟುಂಬ ಕಾಯುತ್ತಿದೆ.

ಅದಾಗಲೇ ಊದಿಕೊಂಡಿರುವ ಶವದ ದುರ್ನಾತ ಲೆಕ್ಕಿಸದೆ, ಶವದ ಎದುರು ಬೆಂಕಿ ಹಚ್ಚಿ ರಾತ್ರಿಯಿಡೀ ಬಾಲಕಿ ಮನೆ ಬಳಿ ಕಾವಲು ಕುಳಿತ ಊರಿನವರು ಸಹ ತಮ್ಮೂರ ಹುಡುಗಿಯ ಅನ್ಯಾಯದ ಸಾವಿಗೆ ವಿಧಿಯನ್ನು ಶಪಿಸುತ್ತಾ, ನ್ಯಾಯದ ನಿರೀಕ್ಷೆಯಲ್ಲಿದ್ದಾರೆ.

ಪೊಲೀಸರು, ಅಧಿಕಾರಿಗಳು, ರಾಜಕಾರಣಿಗಳು, ಮುಖಂಡರು, ಸಂಘಟನೆಗಳ ಪದಾಧಿಕಾರಿಗಳು, ಮಾಧ್ಯಮದವರು ಸೇರಿದಂತೆ ಯಾರೇ ಊರಿಗೆ ಹೋದರೂ, 'ನಮ್ಮೂರ ಹುಡುಗಿ ಸಾವಿಗೆ ನ್ಯಾಯ ಕೊಡಿಸಿ ಸಾರ್...' ಎಂದು ಕುಟುಂಬದವರು ಹಾಗೂ ಊರಿನವರು ಅಂಗಲಾಚುತ್ತಿದ್ದಾರೆ.

ವರದಿ ಬರಲಿ: ಮಗಳ ಮೇಲೆ ಅತ್ಯಾಚಾರವಾಗಿದೆ ಎಂದು ಹೇಳಿದರೂ ಪೊಲೀಸರು ನಂಬುತ್ತಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದರೆ ಗೊತ್ತಾಗುತ್ತದೆ ಎನ್ನುತ್ತಿದ್ದಾರೆ‌. ಆದರೆ, ನಿನ್ನೆ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದರೂ, ಇನ್ನೂ ವರದಿ ಸಿಕ್ಕಿಲ್ಲ ಎನ್ನುತ್ತಿದ್ದಾರೆ‌. ವರದಿ ಬಂದು ಯಾವ ರೀತಿ ಕೊಲೆ ಮಾಡಿದ್ದಾರೆ? ಅತ್ಯಾಚಾರ ಆಗಿದೆಯೇ ಇಲ್ಲವೊ ಎಂದು ಖಚಿತವಾಗಿ ಹೇಳುವವರೆಗೆ ನಾವು ಮಗಳನ್ನು ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಪಟ್ಟು ಹಿಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.