ADVERTISEMENT

ಚನ್ನಪಟ್ಟಣ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 5:11 IST
Last Updated 21 ಸೆಪ್ಟೆಂಬರ್ 2021, 5:11 IST
ಚನ್ನಪಟ್ಟಣದ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭವನ್ನು ಸಹ ಪ್ರಾಧ್ಯಾಪಕ ಪ್ರೊ.ಭರತ್ ರಾಜ್ ಉದ್ಘಾಟಿಸಿದರು. ಪ್ರಾಂಶುಪಾಲ ಡಾ.ವೆಂಕಟೇಶ್ ಹಾಗೂ ಸಹಾಯಕ ಪ್ರಾಧ್ಯಾಪಕರು ಹಾಜರಿದ್ದರು
ಚನ್ನಪಟ್ಟಣದ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭವನ್ನು ಸಹ ಪ್ರಾಧ್ಯಾಪಕ ಪ್ರೊ.ಭರತ್ ರಾಜ್ ಉದ್ಘಾಟಿಸಿದರು. ಪ್ರಾಂಶುಪಾಲ ಡಾ.ವೆಂಕಟೇಶ್ ಹಾಗೂ ಸಹಾಯಕ ಪ್ರಾಧ್ಯಾಪಕರು ಹಾಜರಿದ್ದರು   

ಚನ್ನಪಟ್ಟಣ: ‘ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳದ ಹೊರತು ಪದವಿ ಪ್ರಮಾಣ ಪತ್ರ ಪಡೆದರೂ ಅದು ವ್ಯರ್ಥ’ ಎಂದು ಸಹ ಪ್ರಾಧ್ಯಾಪಕ ಪ್ರೊ.ಭರತ್ ರಾಜ್ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಅಂತಿಮ ಬಿಎ ವಿದ್ಯಾರ್ಥಿಗಳಿಗೆ ಶನಿವಾರ ನಡೆದ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಮೌಲ್ಯ, ಸಂಯಮ ವಿದ್ಯಾರ್ಥಿಗಳಿಗೆ ಕವಚವಿದ್ದಂತೆ. ಭವ್ಯ ಭಾರತದ ಕನಸು ನನಸಾಗಬೇಕಾದರೆ ವಿದ್ಯಾರ್ಥಿಗಳು ಅವುಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ADVERTISEMENT

ಅಧ್ಯಕ್ಷತೆವಹಿಸಿದ್ದ ಪ್ರಾಂಶುಪಾಲ ಡಾ.ವೆಂಕಟೇಶ್ ಮಾತನಾಡಿ, ಕಾಲೇಜು ಇಂದು ಪ್ರಗತಿಯ ಪಥದಲ್ಲಿ ಸಾಗುತ್ತಿದ್ದು, ಇದಕ್ಕೆ ವಿದ್ಯಾರ್ಥಿಗಳ ಕೊಡುಗೆ ಅನನ್ಯವಾದುದು. ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಹೊರಟಿರುವ ನಿಮ್ಮಗಳ ಮುಂದಿನ ಜೀವನ ಉಜ್ವಲವಾಗಿರಲಿ ಎಂದು
ಆಶಿಸಿದರು.

ಪ್ರಾಧ್ಯಾಪಕರಾದ ಕೆ.ಎಂ. ಮಾಯಿಗೆಗೌಡ, ಪದ್ಮನಾಭ, ಅಶ್ವಿನಿ, ಯದುನಂದನ್, ಡಾ.ಹೇಮಾವತಿ, ಬಿ.ಸಿ. ಉಮೇಶ್ ಹಾಜರಿದ್ದರು.

ವಿದ್ಯಾರ್ಥಿಗಳಾದ ನಂಜುಂಡೇಶ್ವರ, ವಿನಯ್, ಬೊಮ್ಮರಾಜು, ಪೂಜಾ ಅನಿಸಿಕೆ
ಹಂಚಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.