ADVERTISEMENT

ರಕ್ತದಾನ ಮಾಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2021, 5:08 IST
Last Updated 19 ಸೆಪ್ಟೆಂಬರ್ 2021, 5:08 IST
ಹಾರೋಹಳ್ಳಿಯ ಗ್ರಾಮಾಂತರ ಪ್ರೌಢಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮುಖಂಡರಾದ ವಿ. ಬಾಬು, ಚಂದ್ರು, ಶಿವಮುತ್ತು, ಕೆ.ಆರ್‌. ಸುರೇಶ್‌, ನವೀನ್‌, ವೆಂಕಟೇಶ್‌ ಉಪಸ್ಥಿತರಿದ್ದರು
ಹಾರೋಹಳ್ಳಿಯ ಗ್ರಾಮಾಂತರ ಪ್ರೌಢಶಾಲೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಮುಖಂಡರಾದ ವಿ. ಬಾಬು, ಚಂದ್ರು, ಶಿವಮುತ್ತು, ಕೆ.ಆರ್‌. ಸುರೇಶ್‌, ನವೀನ್‌, ವೆಂಕಟೇಶ್‌ ಉಪಸ್ಥಿತರಿದ್ದರು   

ಕನಕಪುರ: ‘ದೇಶದಲ್ಲಿ ಕೊರೊನಾ ಸೋಂಕಿನಿಂದ ಬಹಳಷ್ಟು ಜನರ ಆರೋಗ್ಯ ಸಮಸ್ಯೆಗೆ ತುತ್ತಾಗಿದೆ. ಅವರ ಚೇತರಿಕೆ ಹಾಗೂ ಶಸ್ತ್ರಚಿಕಿತ್ಸೆಗೆ ಬೇಕಾಗುವ ರಕ್ತದ ಕೊರತೆ ನೀಗಿಸಲು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಬೇಕು’ ಎಂದು ಅಂಬೇಡ್ಕರ್‌ ಕ್ರಾಂತಿಸೇನೆಯ ರಾಜ್ಯ ಘಟಕದ ಅಧ್ಯಕ್ಷ ವಿ. ಬಾಬು ಮನವಿ ಮಾಡಿದರು.

ತಾಲ್ಲೂಕಿನ ಹಾರೋಹಳ್ಳಿಯ ಗ್ರಾಮಾಂತರ ಪ್ರೌಢಶಾಲೆ ಆವರಣದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಮತ್ತು ರಾಷ್ಟ್ರೋತ್ಥಾನ ಪರಿಷತ್‌ ಸಹಯೋಗದಡಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಅಂಗವಾಗಿ ಇತ್ತೀಚೆಗೆ ನಡೆಸಿದ್ದ ಬೃಹತ್‌ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.

ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಚಂದ್ರು ಮಾತನಾಡಿದರು.

ADVERTISEMENT

ಶಿಬಿರದಲ್ಲಿ 100 ಯೂನಿಟ್‌ನಷ್ಟು ರಕ್ತ ಸಂಗ್ರಹವಾಯಿತು. ರಾಷ್ಟ್ರೋತ್ಥಾನ ಸಂಸ್ಥೆಯ ಈಶ್ವರ್‌ ಮತ್ತು ತಂಡ ಶಿಬಿರ ನಡೆಸಿಕೊಟ್ಟರು. ಬಿಜೆಪಿ ಎಸ್ಸಿ ಮೋರ್ಚಾ ತಾಲ್ಲೂಕು ಅಧ್ಯಕ್ಷ ಶಿವಮುತ್ತು, ಪದಾಧಿಕಾರಿಗಳಾದ ನಾಗೇಂದ್ರ, ಪುನೀತ್‌, ಚಂದನ್‌, ವೆಂಕಟೇಶ್‌, ಶ್ಯಾಮ್‌, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟ ಸಂಸ್ಥೆಯ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಆರ್‌. ಸುರೇಶ್‌, ಸಂಘಟನಾ ಕಾರ್ಯದರ್ಶಿ ನವೀನ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.