ADVERTISEMENT

ಅಂಬೇಡ್ಕರ್, ಜಗಜೀವನ್ ರಾಮ್ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2026, 2:45 IST
Last Updated 25 ಫೆಬ್ರುವರಿ 2026, 2:45 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ರಾಮನಗರ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಸಾಲಿನಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಗೆ ಪ್ರಶಸ್ತಿಗಳನ್ನು ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಮಟ್ಟದಲ್ಲಿ ಸರ್ಕಾರದ ವತಿಯಿಂದ ಏ. 5ರಂದು ಜಗಜೀವನ್ ರಾಮ್ ಜನ್ಮ ದಿನಾಚರಣೆ ಹಾಗೂ ಏ. 14ರಂದು ಸಂವಿಧಾನ ಅಂಬೇಡ್ಕರ್ ಜನ್ಮ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ, ಡಾ. ಬಾಬು ಜಗಜೀವನ್ ರಾ‌ಮ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲು ಉದ್ದೇಶಿಸಲಾಗಿದೆ.

ADVERTISEMENT

ಅರ್ಹ ವ್ಯಕ್ತಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ವಿವರದೊಂದಿಗೆ ಪೂರಕ ದಾಖಲೆಗಳನ್ನು ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ಜಿಲ್ಲೆ, 2ನೇ ಮಹಡಿ, ಜಿಲ್ಲಾ ಪಂಚಾಯಿತಿ ಭವನ, ಬಿ.ಎಂ. ರಸ್ತೆ, ರಾಮನಗರ -562159. ಈ ಕಚೇರಿಗೆ ಮಾರ್ಚ್ 9ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.