ADVERTISEMENT

23ಕ್ಕೆ ಅಂಬೇಡ್ಕರ್ ಹಬ್ಬ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2022, 4:49 IST
Last Updated 16 ಏಪ್ರಿಲ್ 2022, 4:49 IST
ಚನ್ನಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕಿನ ಪರಿಶಿಷ್ಟ ಸಮುದಾಯದ ಮುಖಂಡರು ಹಾಜರಿದ್ದರು
ಚನ್ನಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕಿನ ಪರಿಶಿಷ್ಟ ಸಮುದಾಯದ ಮುಖಂಡರು ಹಾಜರಿದ್ದರು   

ಚನ್ನಪಟ್ಟಣ: ತಾಲ್ಲೂಕು ಪರಿಶಿಷ್ಟ ಸಮುದಾಯದಿಂದ ಏ. 23ರಂದು ನಗರದ ಹೌಸಿಂಗ್ ಬೋರ್ಡ್ ಬಡಾವಣೆ ಆವರಣದಲ್ಲಿ ಸ್ವಾಭಿಮಾನಿ ಅಂಬೇಡ್ಕರ್ ಹಬ್ಬ ಆಯೋಜಿಸಲಾಗಿದೆ ಎಂದು ತಾಲ್ಲೂಕಿನ ಪರಿಶಿಷ್ಟ ಸಮುದಾಯದ ಮುಖಂಡರು ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿಯೇ ಪ್ರಥಮವಾಗಿ ಒಗ್ಗಟ್ಟಿನ ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಆಚರಣಾ ಸಮಿತಿಯಿಂದ ಅಂಬೇಡ್ಕರ್ ಹಬ್ಬ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ್ ಯಶವಂತರಾವ್ ಅಂಬೇಡ್ಕರ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಅಂಬೇಡ್ಕರ್ ಹಬ್ಬದ ಹಿನ್ನೆಲೆಯಲ್ಲಿ ತಾಲ್ಲೂಕಿನ ಎಲ್ಲಾ ಪರಿಶಿಷ್ಟ ಸಮುದಾಯದ ಮಂದಿ ಪಕ್ಷಾತೀತವಾಗಿ ಭಾಗವಹಿಸಲಿದ್ದಾರೆ. ಅಂದು ಪಟ್ಟಣದ ಪೊಲೀಸ್ ಠಾಣೆ ಮುಂಭಾಗದಲ್ಲಿನ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ನಗರದ ಮಂಗಳವಾರಪೇಟೆಯಿಂದ ಅಂಬೇಡ್ಕರ್ ಭಾವಚಿತ್ರವನ್ನು ಪಲ್ಲಕ್ಕಿಯಲ್ಲಿರಿಸಿ ಬೆಂಗಳೂರು– ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಲಾಗುವುದು. ಹೌಸಿಂಗ್ ಬೋರ್ಡ್ ಬಡಾವಣೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ವಿವರಿಸಿದರು.

ADVERTISEMENT

ಉಪನ್ಯಾಸಕ ರವಿಕುಮಾರ್, ಮುಖಂಡರಾದ ಜಯಕಾಂತ್, ಚಕ್ಕಲೂರು ಚೌಡಯ್ಯ, ಕೂಡ್ಲೂರು ಸಿದ್ದರಾಮು, ಕೆಂಗಲ್ಲಮೂರ್ತಿ, ನೀಲಸಂದ್ರ ಸಿದ್ದರಾಮು, ಅಪ್ಪಗೆರೆ ಮಂಜುನಾಥ್, ರಾಂಪುರ ಪಾರ್ಥ, ಚಿಕ್ಕೇನಹಳ್ಳಿ ಕುಮಾರ್, ಚಿಕ್ಕೇನಹಳ್ಳಿ ಶಿವರಾಮ್, ಜಯಚಂದ್ರ, ಪ್ರದೀಪ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.