ಮಾಗಡಿ: ಪಟ್ಟಣದ ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಈ ವೇಳೆ ಶಿಕ್ಷಕ ಡಿ.ಜಿ.ಗಂಗಾಧರ್ ಮಾತನಾಡಿ, ಬಾಬಾ ಸಾಹೇಬರು ಮಹಾನ್ ವ್ಯಕ್ತಿಯಾಗಿದ್ದು, ಅವರ ಚಿಂತನೆಗಳು ಇಂದಿಗೂ ಎಲ್ಲರಿಗೂ ಸ್ಫೂರ್ತಿದಾಯಕವಾದವು. ಸಂವಿಧಾನದ ರಚನಕಾರರಾದ ಅಂಬೇಡ್ಕರ್ ಅವರು ಜಾತಿ ವ್ಯವಸ್ಥೆಯನ್ನು ವಿರೋಧಿಸುತ್ತಲೇ ಅದನ್ನು ಸಮಾಜದಿಂದ ನಿರ್ಮೂಲನೆ ಮಾಡಲು ಪ್ರಯತ್ನಿಸಿದರು ಎಂದರು.
ಅಂಬೇಡ್ಕರ್ ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತ. ಅವರ ತತ್ವ ಆದರ್ಶಗಳು ಸುಂದರ ಸಮಾಜ ನಿರ್ಮಿಸುವಂತಹದ್ದು. ಸಂವಿಧಾನ ಪ್ರತಿಯೊಬ್ಬ ಭಾರತೀಯರ ಪಾಲಿನ ಪವಿತ್ರ ಗ್ರಂಥವಾಗಿದೆ ಎಂದು ತಿಳಿಸಿದರು.
ಸಂಸ್ಥೆಯ ಅಧ್ಯಕ್ಷ ಡಿ.ಸಿ.ರಾಮಚಂದ್ರ ಮಾತನಾಡಿ, ಅಂಬೇಡ್ಕರ್ ಅವರಂತೆ ಎಲ್ಲಾ ವಿದ್ಯಾರ್ಥಿಗಳು ಪುಸ್ತಕ ಪ್ರಿಯರಾಗಿ ಓದುವ ಹವ್ಯಾಸವನ್ನು ಮೈಗೂಡಿಸಿಕೊಳ್ಳಿ ಎಂದು ವಿದ್ಯಾರ್ಥಿ ಸಮುದಾಯಕ್ಕೆ ಕರೆ ನೀಡಿದರು.
ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸಿ.ಜಿ.ಚಂದನ್ ಅವರನ್ನು ಸಮೃದ್ಧಿ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
ಈ ವೇಳೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಂಸ್ಥೆಯ ತಾಲ್ಲೂಕು ಕಾರ್ಯದರ್ಶಿ ಎನ್.ಮುನಿಯಪ್ಪ, ಶಿಕ್ಷಕ ಆರ್. ನರಸಿಂಹಮೂರ್ತಿ, ಸಂಸ್ಥೆಯ ಸಿಬ್ಬಂದಿಗಳಾದ ಲೀಲಾವತಿ, ನಾರಾಯಣ್ ಗಿರೀಶ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.