ADVERTISEMENT

ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2025, 2:52 IST
Last Updated 4 ನವೆಂಬರ್ 2025, 2:52 IST
   

ರಾಮನಗರ: ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಕನಕಪುರ ಮತ್ತು ಚನ್ನಪಟ್ಟಣ ತಾಲ್ಲೂಕುಗಳಿಗೆ ಮಾತ್ರ ಸೀಮಿತಗೊಳಿಸಿ, 2025-26ನೇ ಸಾಲಿಗೆ ಕೋಳಿಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ವಿತರಿಸಿ ಆದಾಯ ಹೆಚ್ಚಿಸುವ ಕಾರ್ಯಕ್ರಮಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ವರ್ಗದ ಗ್ರಾಮೀಣ ಮಹಿಳೆಯರು, ಸ್ವ-ಸಹಾಯ ಸಂಘದ ಮಹಿಳಾ ಸದಸ್ಯರು, ರೈತ ಉತ್ಪಾದಕ ಸಂಸ್ಥೆಯ ಮಹಿಳಾ ಸದಸ್ಯರು ಹಾಗೂ ಕುಕ್ಕುಟ ಸಹಕಾರ ಸಂಘಗಳ ಮಹಿಳಾ ಸದಸ್ಯರು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ತಮ್ಮ ತಾಲ್ಲೂಕಿನ ಪಶು ಆಸ್ಪತ್ರೆಯ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಅವರಿಂದ ಪಡೆದು ದಾಖಲೆಗಳೊಂದಿಗೆ ನ. 18ರೊಳಗೆ ಸಲ್ಲಿಸಬೇಕು.

ADVERTISEMENT

ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಯನ್ನು (ಆಡಳಿತ) ಕಚೇರಿ ವೇಳೆಯಲ್ಲಿ ಸಂಪರ್ಕಿಸಬೇಕು ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಡಾ. ಅಸಾದುಲ್ಲಾ ಷರೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.