ADVERTISEMENT

ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 2:45 IST
Last Updated 12 ಆಗಸ್ಟ್ 2025, 2:45 IST
<div class="paragraphs"><p>ವಿಕಲಚೇತನರ ದಿನಾಚರಣೆ</p></div>

ವಿಕಲಚೇತನರ ದಿನಾಚರಣೆ

   

ರಾಮನಗರ: ಪ್ರತಿ ವರ್ಷದಂತೆ ಈ ವರ್ಷವೂ ಸಹ ವಿಶ್ವ ವಿಕಲಚೇತನರ ದಿನಾಚರಣೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಡಿ. 3ರಂದು ಅಚರಿಸಲಾಗುತ್ತಿದೆ. ಇದರ ಅಂಗವಾಗಿ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಂಸ್ಥೆಗಳಿಗೆ ವಿಶೇಷ ಶಿಕ್ಷಕರಿಗೆ ಮತ್ತು ವೈಯಕ್ತಿಕವಾಗಿ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಿದೆ.

ಆದ್ದರಿಂದ ವೈಯಕ್ತಿಕ ವಿಭಾಗ, ವಿಶೇಷ ಶಿಕ್ಷಕರ ವಿಭಾಗ ಮತ್ತು ಸಂಸ್ಥೆಗಳ ವಿಭಾಗದಲ್ಲಿ ಯಾರು ಅತ್ಯುತ್ತಮ ಸಾಧನೆ ಮಾಡಿರುತ್ತಾರೊ ಅವರು ನಿಗದಿತ ದಾಖಲಾತಿಗಳೊಂದಿಗೆ ಅ. 15ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಬೇಕು.

ADVERTISEMENT

ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ಕೊಠಡಿ ಸಂಖ್ಯೆ 107, ನೆಲ ಮಹಡಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ಬಿ.ಎಂ ರಸ್ತೆ ಬೆಂಗಳೂರು ದಕ್ಷಿಣ ಜಿಲ್ಲೆ. ಈ ಕಚೇರಿಯನ್ನು ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.