ಹಾರೋಹಳ್ಳಿ: ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾಬಾಯಿ ಅವರ ನೇತೃತ್ವದಲ್ಲಿ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ಆನೇಕಲ್ ರಸ್ತೆ, ಬಿಡದಿ ರಸ್ತೆಯ ಅಂಗಡಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು 40ಕೆಜಿಗೂ ಅಧಿಕ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 20ಸಾವಿರ ದಂಡ ವಸೂಲಿ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ವೇತಾಬಾಯಿ, ಸರ್ಕಾರ ಈಗಾಗಲೇ ಪ್ಲಾಸ್ಟಿಕ್ ಅನ್ನು ಬ್ಯಾನ್ ಮಾಡಿದೆ. ಮೊದಲ ಬಾರಿಗೆ ದಾಳಿ ನಡೆಸಿರುವುದರಿಂದ ಕೆಜಿಗೆ ₹500 ದಂಡವನ್ನು ಸಂಗ್ರಹಿಸಿದ್ದೇವೆ. ಮುಂದಿನ ದಿನಗಳಲ್ಲಿ ₹ 1000, ಅನಂತರವೂ ಇದನ್ನೇ ಮುಂದುವರೆಸಿದರೆ ಕೆಜಿಗೆ ₹ 5000 ದಂಡ ಹಾಕಲಾಗುವುದು ಎಂದು ಎಚ್ಚರಿಸಿದರು.
ಇದೇ ವೇಳೆ ಪ.ಪಂ ರಜಸ್ವ ನಿರೀಕ್ಷಕ ನಾಗರಾಜು,ಶಿವರಾಜು ಸೇರಿದಂತೆ ಪ.ಪಂ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.