ADVERTISEMENT

3ನೇ ಅಲೆ ತಡೆಗೆ ಅರಿವು ಅಗತ್ಯ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2021, 3:53 IST
Last Updated 1 ಆಗಸ್ಟ್ 2021, 3:53 IST
ಚನ್ನಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ನೂತನ ಅಧ್ಯಕ್ಷ ಎಂ.ಕೆ. ನಿಂಗಪ್ಪ ಅಧಿಕಾರ ಸ್ವೀಕರಿಸಿದರು
ಚನ್ನಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆಯ ನೂತನ ಅಧ್ಯಕ್ಷ ಎಂ.ಕೆ. ನಿಂಗಪ್ಪ ಅಧಿಕಾರ ಸ್ವೀಕರಿಸಿದರು   

ಚನ್ನಪಟ್ಟಣ: ‘ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹರಡುವ ವಿಚಾರ ಜನಮಾನಸದಲ್ಲಿ ಭೀತಿ ಹುಟ್ಟಿಸಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಾಗಿರುವುದು ಅವಶ್ಯಕವಾಗಿದೆ’ ಎಂದು ರೋಟರಿ ಸಂಸ್ಥೆ ನೂತನ ಅಧ್ಯಕ್ಷ ಎಂ.ಕೆ. ನಿಂಗಪ್ಪ ಹೇಳಿದರು.

ಪಟ್ಟಣದ ರೋಟರಿ ಭವನದಲ್ಲಿ ಶನಿವಾರ ನಡೆದ ನೂತನ ಪದಾಧಿ ಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ
ಮಾತನಾಡಿದರು.

ಪರಿಸರ ಕಾಳಜಿಯ ಭಾಗವಾಗಿ ಗಿಡ ನೆಡುವ ಕಾರ್ಯಕ್ರಮ, ಶಾಲಾ ಹಂತದಲ್ಲಿ ಮಕ್ಕಳಿಗೆ ಪರಿಸರದ ಬಗ್ಗೆ ಉಪನ್ಯಾಸ, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿವುದು, ಕ್ರೀಡೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

ADVERTISEMENT

ಡಿವೈಎಸ್ಪಿ ರಮೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ಪರಿಸರ ಅಸಮತೋಲನಕ್ಕೆ ನಾವೇ ಕಾರಣರಾಗಿದ್ದೇವೆ. ಅದನ್ನು ಸರಿಪಡಿಸುವ ಜವಾಬ್ದಾರಿಯೂ ನಮ್ಮ ಮೇಲಿದೆ ಎಂದು ಹೇಳಿದರು.

ನಗರ ಪ್ರದೇಶದಲ್ಲಿ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಹಾಗೆಯೇ ಹಸಿರೀಕರಣಗೊಳಿಸುವ ಕೆಲಸವೂ ಆಗಬೇಕು. ಸಮಾಜಕ್ಕೆ ಅವಶ್ಯವಿರುವ ಎಲ್ಲ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಕಾರ್ಯೋನ್ಮುಖವಾಗಬೇಕು ಎಂದು ಸಲಹೆ ನೀಡಿದರು.

ರೋಟರಿ ಸಂಸ್ಥೆ ವಲಯ ಗೌವರ್ನರ್‌ ಹೊನ್ನೇಗೌಡ ಮಾತನಾಡಿ, ನೂತನ ಪದಾಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಉತ್ತಮವಾಗಿ ಕಾರ್ಯ ನಿರ್ವಹಿಸಬೇಕು. ಸಮಾಜಕ್ಕೆ ಸೇವೆ ಸಲ್ಲಿಸುವುದು ಸಂಸ್ಥೆಯ ಮುಖ್ಯ ಉದ್ದೇಶವಾಗಿದೆ ಎಂದರು.

ನಿರ್ಗಮಿತ ಅಧ್ಯಕ್ಷ ಹೇಮುಕುಮಾರ್ ನೂತನ ಅಧ್ಯಕ್ಷ ನಿಂಗಪ್ಪಗೆ ಅಧಿಕಾರ ಹಸ್ತಾಂತರಿಸಿದರು. ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ರೋಟರಿ ಸಹ ಗೌವರ್ನರ್‌ ಪ್ರಶಾಂತ್, ಕಾರ್ಯದರ್ಶಿ ಎನ್. ಗಣೇಶ್, ವಿನುತಾ ನಿಂಗಪ್ಪ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.