
ಪ್ರಜಾವಾಣಿ ವಾರ್ತೆ
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವ ಸಂಪುಟವನ್ನು ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಿದ್ದು, ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ಅವರಿಗೆ ಅವಕಾಶ ದೊರೆತಿಲ್ಲ.
ಐದನೇ ಬಾರಿಗೆ ಶಾಸಕರಾಗಿ ಆಯ್ಕೆ ಆಗಿರುವ ಬಾಲಕೃಷ್ಣಗೆ ಹಿರಿತನ ಮತ್ತು ಒಕ್ಕಲಿಗ ಕೋಟಾ ಅಡಿ ಸಚಿವ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆ ಹೊಂದಿದ್ದರು. ಆದರೆ, ಅವರ ನಿರೀಕ್ಷೆ ಹುಸಿಯಾಗಿದೆ. ಸದ್ಯ ಡಿ.ಕೆ. ಶಿವಕುಮಾರ್ ಅವರೇ ಜಿಲ್ಲೆಯ ಉಸ್ತುವಾರಿಯನ್ನೂ ವಹಿಸಿಕೊಳ್ಳುವ ಸಾಧ್ಯತೆ ಇದೆ.
ಜಿಲ್ಲೆಯವರೇ ಆದ ಡಿ.ಕೆ. ಶಿವಕುಮಾರ್ ರಾಜ್ಯದ ಉಪ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಿದ್ದಾರೆ. ಹೀಗಿದ್ದೂ ಜಿಲ್ಲೆಯಿಂದ ಇನ್ನೊಬ್ಬರಿಗೆ ಅವಕಾಶ ಸಿಗಬಹುದು ಎನ್ನುವ ಆಶಯದೊಂದಿಗೆ ಎಚ್.ಸಿ. ಬಾಲಕೃಷ್ಣ ದೆಹಲಿಗೆ ತೆರಳಿದ್ದರು. ಡಿಕೆಶಿ ಬೆನ್ನಿಗೆ ನಿಂತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.