ADVERTISEMENT

ರಾಮನಗರ | ಅವಧಿಯೊಳಗೆ ಸಮೀಕ್ಷೆ ಮುಗಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2025, 2:57 IST
Last Updated 1 ಅಕ್ಟೋಬರ್ 2025, 2:57 IST
<div class="paragraphs"><p>ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಮಾತನಾಡಿದರು.&nbsp;</p></div>

ರಾಮನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತು ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಮಾತನಾಡಿದರು. 

   

ರಾಮನಗರ: ‘ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು’ ಎಂದು ವಿಪತ್ತು ನಿರ್ವಹಣೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಶ್ಮಿ ಮಹೇಶ್ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮೀಕ್ಷೆ ಪ್ರಗತಿ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಗುರುತಿಸಲಾದ 3.4 ಲಕ್ಷಕ್ಕೂ ಹೆಚ್ಚಿನ ಮನೆಗಳಿಗೆ ಸಮೀಕ್ಷೆದಾರರರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು. ಈ ಕಾರ್ಯ ಮುಗಿಸಲು ಮೇಲ್ವಿಚಾರಕರು, ತಹಶೀಲ್ದಾರರು, ತಾ.ಪಂ. ಇಒಗಳು ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಶ್ರಮಿಸಬೇಕು’ ಎಂದರು.

ADVERTISEMENT

‘ಸಮೀಕ್ಷಾ ಕಾರ್ಯಕ್ಕೆ ಜಿಲ್ಲೆಯಲ್ಲಿ 3,161 ಬ್ಲಾಕ್‌ಗಳನ್ನು ರಚಿಸಲಾಗಿದೆ. 20 ಸಮೀಕ್ಷೆದಾರರಿಗೆ ಒಬ್ಬರು ಮೇಲ್ವಿಚಾರಕರಿದ್ದಾರೆ. ಅವರು ಗಣತಿಯಲ್ಲಿ ಯಾವುದೇ ನ್ಯೂನ್ಯತೆಗಳು ಬಾರದಂತೆ ಮೇಲುಸ್ತುವಾರಿ ಕಾರ್ಯ ನಿರ್ವಹಿಸಬೇಕು. ಇದುವರೆಗೂ ಸಮೀಕ್ಷೆ ಕಾರ್ಯಕ್ಕೆ ಗೈರು ಹಾಜರಾಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯಕ್ಕೆ ಇದುವರೆಗೆ ಯಾವುದೇ ಸಮಸ್ಯೆಗಳು ಕಂಡುಬಂದಿಲ್ಲ. ಪ್ರತಿಯೊಬ್ಬರು ಧೈರ್ಯವಾಗಿ ಸಮೀಕ್ಷೆ ಕೈಗೊಂಡು ಸಂಜೆ 7ರೊಳಗೆ ಮುಗಿಸಬೇಕು. ಅ. 7ರೊಳಗೆ ಸಮೀಕ್ಷೆ ಪೂರ್ಣಗೊಳ್ಳಬೇಕು. ಕಡೆ ದಿನದವರೆಗೆ ಕಾಯದೆ ಒಂದು ದಿನ ಮುಂಚೆಯೇ ಮುಗಿಸುವಂತೆ ಪ್ಲಾನ್ ಮಾಡಿಕೊಳ್ಳಬೇಕು. ಏನೇ ಅಡಚಣೆ ಎದುರಾದರೂ ಮೇಲಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಮೋಲ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ಚಂದ್ರಯ್ಯ, ಉಪ ವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಲಾಲ್ ಎಂ.ಜಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಇಬ್ಬರನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಸಮೀಕ್ಷೆ ವಿಷಯದಲ್ಲಿ ಯಾರೂ ನಿರ್ಲಕ್ಷ್ಯ ವಹಿಸದೆ ತಮಗೆ ಕೊಟ್ಟಿರುವ ಜವಾಬ್ದಾರಿ ನಿರ್ವಹಿಸಬೇಕು
ಯಶವಂತ್ ವಿ. ಗುರುಕರ್ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.