ಕನಕಪುರ: ಇಲ್ಲಿನ ಸೆಂಟ್ ಮೈಕೆಲ್ಸ್ ಇಂಗ್ಲಿಷ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಟೌನ್ ಟೆನಿಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಸೇಂಟ್ ಮೈಕಲ್ ಇಂಗ್ಲಿಷ್ ಶಾಲೆಯ 10ನೇ ತರಗತಿಯ ವಿದ್ಯಾರ್ಥಿ ಯಧುನಂದನ್ ಮತ್ತು ವಂಶಿ ರಾಜ್ಯವನ್ನು ಪ್ರತಿನಿಧಿಸಿದ್ದರು.
ರಾಜ್ಯಮಟ್ಟದಲ್ಲಿ ಯಧುನಂದನ್ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.