ADVERTISEMENT

ಬಕ್ರೀದ್: ಮುಸ್ಲಿಮರ ಸಾಮೂಹಿಕ ಪ್ರಾರ್ಥನೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2019, 13:25 IST
Last Updated 12 ಆಗಸ್ಟ್ 2019, 13:25 IST
ಚನ್ನಪಟ್ಟಣದ ಮಂಗಳವಾರಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಚನ್ನಪಟ್ಟಣದ ಮಂಗಳವಾರಪೇಟೆ ಈದ್ಗಾ ಮೈದಾನದಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು   

ಚನ್ನಪಟ್ಟಣ: ಪಟ್ಟಣದ ಮುಸ್ಲಿಮರು ಪವಿತ್ರ ಬಕ್ರೀದ್ ಹಬ್ಬವನ್ನು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸುವ ಮೂಲಕ ಸೋಮವಾರ ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಪಟ್ಟಣದ ಮಂಗಳವಾರಪೇಟೆ ಈದ್ಗಾ ಮೈದಾನ, ಪರ್ಹಾ ಶಾಲೆಯ ಮೈದಾನ, ಮೆಹದವಿಯಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ಕೋರಿದರು. ಕೆಲವರು ಮಸೀದಿಗಳಲ್ಲೇ ಪ್ರಾರ್ಥನೆ ಮಾಡಿದ್ದು ವಿಶೇಷವಾಗಿತ್ತು.

ಮುಸ್ಲಿಂ ಧರ್ಮಗುರುಗಳು ಎಲ್ಲರಿಗೂ ಹಬ್ಬದ ಬೋಧನೆ ಮಾಡಿ ಆಶೀರ್ವಚನ ನೀಡಿದರು. ಬಕ್ರೀದ್ ಹಬ್ಬದ ನಿಮಿತ್ತ ಈದ್ಗಾ ಮೈದಾನಗಳ ಬಳಿ ಯಾವುದೇ ಸಮಸ್ಯೆ ಎದುರಾಗದಂತೆ ತಾಲ್ಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಸೂಕ್ತ ನಿಗಾ ವಹಿಸಿತ್ತು.

ಮುಸ್ಲಿಮರು ವಾಸಿಸುವ ತಾಲ್ಲೂಕಿನ ಕೋಡಂಬಹಳ್ಳಿ, ಹೊಂಗನೂರು, ಎಂ.ಕೆ.ದೊಡ್ಡಿಗಳ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.