ಮಾಗಡಿ: ‘ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಗುಪ್ತ ಮತದಾನ ನಡೆಯಲಿದೆ. ಜೆಡಿಎಸ್–ಬಿಜೆಪಿ ಅಭ್ಯರ್ಥಿಯಾದ ನನಗೆ ಮತದಾರರು ಬೆಂಬಲಿಸಬೇಕೆಂದು’ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಚಂದ್ರಮ್ಮ ಕೆಂಪೇಗೌಡ ಮತದಾರರಲ್ಲಿ ಮನವಿ ಮಾಡಿದರು.
ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಮೂಲ್ ಮಾಗಡಿ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಕಸಬಾ, ಮಾಡಬಾಳ್, ಸೋಲೂರು ಹೋಬಳಿ ಮೋಟಗೊಂಡನಹಳ್ಳಿ, ರಾಮನಗರ ತಾಲ್ಲೂಕಿನ ಜಾಲಮಂಗಲ ಹಾಗೂ ಅಕ್ಕೂರು ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹಾಲಿನ ಡೇರಿಗಳ 147 ಮತಗಳಿದ್ದು ಅಧ್ಯಕ್ಷ, ಉಪಾಧ್ಯಕ್ಷ ಅಥವಾ ನಿರ್ದೇಕರಲ್ಲಿ ಯಾರಾದರೊಬ್ಬರು ಮತ ಚಲಾಯಿಸಬಹುದಾಗಿದೆ. ಈ ಚುನಾವಣೆಯಲ್ಲಿ ಗುಪ್ತ ಮತದಾನ ನಡೆಯಲಿದೆ. ವಿರೋಧಿಗಳ ಯಾವುದೇ ಅಮಿಷಕ್ಕೆ ಒಳಗಾಗದೇ ಬೆಂಬಲಿಸಬೇಕು’ ಎಂದು ಮನವಿ ಮಾಡಿದರು.
ತಗ್ಗೀಕುಪ್ಪೆ ಗ್ರಾ.ಪಂ ಮಾಜಿ ಅಧ್ಯಕ್ಷ ಹೊಸಹಳ್ಳಿ ರಂಗಣ್ಣಿ, ಜೆಡಿಎಸ್ ಯುವ ಘಟಕದ ತಾಲ್ಲೂಕು ಘಟಕದ ಅಧ್ಯಕ್ಷ ವಿಜಯ್‌ಕುಮಾರ್, ಧನುಷ್, ದಿನೇಶ್, ಕೃಷ್ಣಮೂರ್ತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.