ರಾಮನಗರ: ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸದಂತೆ ನಿಷೇಧಾಜ್ಞೆ ವಿಧಿಸಿ ಡಿ.ಸಿ ಹೊರಡಿರುವ ಆದೇಶ ಹಿಂಪಡೆಯುವುದು ಸೇರಿದಂತೆ, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದವು.
ನಗರದ ಎಸ್.ಪಿ ಕಚೇರಿ ವೃತ್ತದಲ್ಲಿರುವ ಕಂದಾಯ ಭವನದ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು, ಅಲ್ಲಿಂದ ಡಿ.ಸಿ ಕಚೇರಿ ಪ್ರವೇಶ ದ್ವಾರದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಿಷೇಧಾಜ್ಞೆ ಇರುವುದರಿಂದ ಪ್ರತಿಭಟನಾಕಾರರು ಕಚೇರಿ ಆವರಣ ಪ್ರವೇಶಿಸದಂತೆ ಪೊಲೀಸರು ಬ್ಯಾರಿಕೇಡ್ ಗಳನ್ನು ಅಡ್ಡವಾಗಿಟ್ಟು ನಿಗಾ ವಹಿಸಿದರು.
ಅಹಿತರ ಘಟನೆ ನಡೆಯದಂತೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋದರೆ ಪ್ರತಿಭಟನಾಕಾರರನ್ನು ಬಂಧಿಸಲು ಪೊಲೀಸ್ ಬಸ್ ಗಳು ಸನ್ನದ್ಧ ಸ್ಥಿತಿಯಲ್ಲಿ ನಿಂತಿವೆ. ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಜಿಲ್ಲೆಯ ಪೊಲೀಸ್ ಇನ್ಸ್‌ಪೆಕ್ಟರ್ ಗಳು ಹಾಗೂ ಸಿಬ್ಬಂದಿಯನ್ನು ಕರೆಯಿಸಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.