ಚನ್ನಪಟ್ಟಣ: ಮರಾಠ ಅಭಿವೃದ್ಧಿ ನಿಗಮದ ವಿಚಾರದಲ್ಲಿ ಕರ್ನಾಟಕ ಬಂದ್ ಮಾಡುವ ಅವಶ್ಯ ಇಲ್ಲ ಎಂದು ಶಾಸಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
‘ಕೇವಲ ಎರಡು ಮೂರು ಜಿಲ್ಲೆಗಳಲ್ಲಿ ಮಹಾರಾಷ್ಟ್ರದವರು ಕ್ಯಾತೆ ತೆಗೆಯುತ್ತಿದ್ದಾರೆ. ಅಲ್ಲಿ ವಾಸವಿರುವ ಮರಾಠಿಗರು ಕನ್ನಡದ ವಿರುದ್ಧವಿದ್ದಾರೆ. ಆದರೆ, ಇಡೀ ರಾಜ್ಯದಲ್ಲಿ ಮರಾಠಿ ಭಾಷಿಕರು ವಿವಿಧ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ತಮ್ಮ ಜೀವನ ರೂಪಿಸಿಕೊಂಡಿದ್ದಾರೆ. ಅವರು ನಮ್ಮಲ್ಲಿಯೇ ಬೆರೆತು ಹೋಗಿದ್ದಾರೆ. ಕೇವಲ ಕೆಲವರು ಮಾತ್ರ ಕನ್ನಡ ವಿರೋಧಿಸುತ್ತಾರೆ ಎಂದರೆ ಎಲ್ಲರೂ ವಿರೋಧಿಗಳಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ಮತ ಪಡೆಯುವ ಸಲುವಾಗಿ ಯಾವುದೇ ಇಂತಹ ಅನವಶ್ಯ ನಿರ್ಧಾರ ತೆಗೆದುಕೊಳ್ಳಬಾರದು. ಭಾಷಿಕರ ಮಧ್ಯೆ ವಿಷಬೀಜ ಬಿತ್ತಬಾರದು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.