ADVERTISEMENT

ಕಠಿಣ ಪರಿಶ್ರಮವಿದ್ದರೆ ಯಶಸ್ಸು ಕಟ್ಟಿಟ್ಟ ಬುತ್ತಿ: ಕೃಷ್ಣವೇಣಿ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2023, 7:35 IST
Last Updated 7 ಡಿಸೆಂಬರ್ 2023, 7:35 IST
ಬೆಂಗಳೂರು ವಿಶ್ವವಿದ್ಯಾಲಯ ಮಟ್ಟದ ಮಹಿಳೆಯರು ಮತ್ತು ಪುರುಷರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ರನ್ನರ್ ಅಪ್ ಸ್ಥಾನ ಪಡೆದ ಕುದೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಪ್ರಾಧ್ಯಾಪಕರು ಬುಧವಾರ ಅಭಿನಂದಿಸಿದರು

ಕುದೂರು: ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಟಿ.ದಾಸರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ಈಚೆಗೆ ನಡೆದ ಮಹಿಳೆಯರ ಮತ್ತು ಪುರುಷರ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದಾರೆ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಕೃಷ್ಣವೇಣಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆ ಅಗಾಧವಾಗಿ ಅಡಗಿರುತ್ತದೆ. ಹಿಂಜರಿಕೆ ಸ್ವಭಾವದಿಂದ ಹಿಂದೆ ಬೀಳುತ್ತಾರೆ. ಕಠಿಣ ಶ್ರಮ ವಹಿಸಿದರೆ ಯಾವುದೇ ಯಶಸ್ಸು ಸುಲಭವಾಗಿ ಪಡೆಯಬಹುದು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ.ಗುರುಮೂರ್ತಿ ಕೆ.ಎಚ್ ಮಾತನಾಡಿದರು.

ADVERTISEMENT

ಕಾಲೇಜಿನ ಪ್ರಾಧ್ಯಾಪಕರಾದ ರಾಜಕುಮಾರ್, ಸಿದ್ದೇಶ್ವರ, ರಾಘವೇಂದ್ರ, ದೇವರಾಜ್, ಶಿವರಾಜ್, ತ್ಯಾಗರಾಜ್, ಪುಟ್ಟಲಕ್ಷ್ಮಯ್ಯ, ಜಗದೀಶ್ ಮತ್ತು ಡಾ.ಮುರಳಿ ಕೂಡ್ಲೂರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.