ADVERTISEMENT

ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಮಾಗಡಿ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2022, 6:06 IST
Last Updated 16 ಡಿಸೆಂಬರ್ 2022, 6:06 IST
ಪ್ರಕರಣ ಸಂಬಂಧ ರಾಮನಗರ ಎಸ್ಪಿ ಸಂತೋಷ್ ಬಾಬು‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು
ಪ್ರಕರಣ ಸಂಬಂಧ ರಾಮನಗರ ಎಸ್ಪಿ ಸಂತೋಷ್ ಬಾಬು‌ ಮಾಧ್ಯಮಗಳಿಗೆ ಮಾಹಿತಿ ನೀಡಿದರು   

ರಾಮನಗರ: ಮಾಗಡಿ ಕಂಚುಗಲ್ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನ್ಯಾಯಾಲಯಕ್ಕೆ 216 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ‌.

ಒಟ್ಟು 72 ಸಾಕ್ಷ್ಯಗಳನ್ನು ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದ ಆರೋಪಿಗಳಾದ ಮೃತ್ಯುಂಜಯ ಸ್ವಾಮೀಜಿ, ನಾಗಲಾಂಬಿಕೆ ಹಾಗೂ ವಕೀಲ ಮಹದೇವಯ್ಯ ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.

ಮತ್ತೊಬ್ಬ ಆರೋಪಿ ಸುರೇಶ್ ತಲೆಮರಿಸಿಕೊಂಡಿದ್ದಾರೆ. ವೈಯಕ್ತಿಕ ದ್ವೇಷದಿಂದ ಬಸವಲಿಂಗ ಸ್ವಾಮೀಜಿ ವಿರುದ್ಧ ಸಂಚು ರೂಪಿಸಿ ಅವರ ಆತ್ಮಹತ್ಯೆಗೆ ಕಾರಣರಾದ ಆರೋಪಹೊರಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.