ADVERTISEMENT

ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ

​ಪ್ರಜಾವಾಣಿ ವಾರ್ತೆ
Published 15 ಮೇ 2021, 3:52 IST
Last Updated 15 ಮೇ 2021, 3:52 IST
ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಗ್ರಾ.ಪಂ ಕಚೇರಿಯಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು
ಚನ್ನಪಟ್ಟಣ ತಾಲ್ಲೂಕಿನ ಕೋಡಂಬಹಳ್ಳಿ ಗ್ರಾ.ಪಂ ಕಚೇರಿಯಲ್ಲಿ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು   

ಚನ್ನಪಟ್ಟಣ: ‘ಬಸವಣ್ಣ ಹನ್ನೆರಡನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ’ ಎಂದು ಪಿಡಿಒ ಭಾಗ್ಯಲಕ್ಷ್ಮಮ್ಮ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಬಸವ ಜಯಂತಿ ಸರಳ ಆಚರಣೆಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ತನ್ನ ವಚನಗಳ ಮೂಲಕ ಸಮಾಜದಲ್ಲಿದ್ದ ಅಂಧಕಾರ, ಜಾತಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಶ್ರಮಿಸಿದ ಬಸವಣ್ಣ ಅವರ ಆದರ್ಶಗಳು ಇಂದಿನ ಸಮಾಜಕ್ಕೆ ದಾರಿದೀಪ. ಇಂದಿನ ಯುವಜನತೆ ಅವರ ಆದರ್ಶ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಪ್ರಗತಿಗೆ ದುಡಿಯಬೇಕು ಎಂದರು.

ADVERTISEMENT

ಮುಖಂಡ ಕೆ.ಎಸ್.ನಾಗರಾಜು, ಗ್ರಾ.ಪಂ ಅಧ್ಯಕ್ಷ ಯೋಗೇಶ್, ಸದಸ್ಯ ಕೆ.ಪಿ. ಪ್ರವೀಣ್ ಕುಮಾರ್, ಕೆ.ಪಿ. ಮಹೇಂದ್ರ, ಸಿದ್ದರಾಜು, ಕೆ.ಸಿ.ಕಾರ್ತಿಕ್, ಆಟೊ ರಮೇಶ್, ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.