ADVERTISEMENT

17 ರಿಂದ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2019, 14:43 IST
Last Updated 16 ಮಾರ್ಚ್ 2019, 14:43 IST

ಚನ್ನಪಟ್ಟಣ: ತಾಲ್ಲೂಕಿನ ಶ್ಯಾನುಭೋಗನಹಳ್ಳಿಯ ಶ್ರೀ ಬಸವೇಶ್ವರಸ್ವಾಮಿಯ ಅಗ್ನಿಕೊಂಡ ಹಾಗೂ ಜಾತ್ರಾ ಮಹೋತ್ಸವವು ಮಾರ್ಚ್‌ 17ರಿಂದ ಮೂರು ದಿನಗಳವರೆಗೆ ನಡೆಯಲಿದೆ.

ಮಳವಳ್ಳಿ ತಾಲ್ಲೂಕಿನ ಹಂಗ್ರಾಪುರ ಮಠದ ಪೀಠಾಧ್ಯಕ್ಷ ಬಸವಲಿಂಗ ದೇಶಿಕೇಂದ್ರ ಸ್ವಾಮಿ ನೇತೃತ್ವದಲ್ಲಿ ಜಾತ್ರಾ ಮಹೋತ್ಸವ ನಡೆಯಲಿದೆ. ಭಾನುವಾರ ಮಧ್ಯಾಹ್ನ 12 ಗಂಟೆಗೆ ಶ್ಯಾನುಭೋಗನಹಳ್ಳಿ ಗ್ರಾಮಸ್ಥರಿಂದ ಸೌದೆ ಕಟ್ಟಿದ ಏರುಗಳು ಮತ್ತು ಬಂಡಿಗಳ ಮೂಲಕ ಮೆರವಣಿಗೆ ಮಾಡಿ ಕೊಂಡಕ್ಕೆ ಸೌದೆ ಹಾಕುವ ಕಾರ್ಯ, ಇತರ ದೇವತಾ ಕಾರ್ಯಗಳು ನಡೆಯಲಿದೆ.

ಸೋಮವಾರ ಬೆಳಿಗ್ಗೆಯಿಂದ ದೇವತಾ ಕಾರ್ಯ, ರಾತ್ರಿ 8 ಗಂಟೆಗೆ ಯಳವಾರ ಬಂಡಿಗಳ ಉತ್ಸವ ನಡೆಯಲಿದೆ. ರಾತ್ರಿ 7 ಗಂಟೆಗೆ ದೇವಸ್ಥಾನದ ಹತ್ತಿರದ ಪಡುಮಗೆರೆ ಭಕ್ತಾಧಿಗಳಿಂದ ಅನ್ನಸಂತರ್ಪಣೆ, ರಾತ್ರಿ 12 ಗಂಟೆಗೆ ಕೊಂಡಕ್ಕೆ ಅಗ್ನಿ ಸ್ಪರ್ಶ ನಡೆಯಲಿದೆ.
ಮಂಗಳವಾರ ಮುಂಜಾನೆ 6 ಗಂಟೆಗೆ ಬಸವೇಶ್ವರ ಸ್ವಾಮಿಯ ಅರ್ಚಕ ದೇವರ ಮೂರ್ತಿ ಹೊತ್ತು ಕೊಂಡ ಪ್ರವೇಶ ಮಾಡಲಿದ್ದಾರೆ. ನಂತರ ದಿನಪೂರ್ತಿ ಗ್ರಾಮದಲ್ಲಿ ದೇವರ ಮೆರವಣಿಗೆ ನಡೆಯಲಿದೆ.

ADVERTISEMENT

ಜಾತ್ರಾ ಮಹೋತ್ಸವದಲ್ಲಿ ವಿವಿಧ ಗ್ರಾಮಗಳ ಭಕ್ತರು ಭಾಗವಹಿಸಲಿದ್ದಾರೆ ಎಂದು ದೇವಸ್ಥಾನ ಸಮಿತಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.