ರಾಮನಗರ: ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಸ್ಥಾಪಿಸಲು ಬಯಸುವ ಮಹಿಳೆಯರಿಗಾಗಿ ಬ್ಯೂಟಿಷಿಯನ್ ಉದ್ಯಮ ಕುರಿತು 4 ವಾರ ಕೌಶಲಾಧಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯನ್ನು ಫೆ. 17ರಂದು ಹಮ್ಮಿಕೊಳ್ಳಲಾಗಿದೆ.
ಬ್ಯೂಟಿಷಿಯನ್ ಉದ್ಯಮ ಸ್ಥಾಪಿಸಲು ಅನುಸರಿಸುವ ಕ್ರಮಗಳು, ತರಬೇತಿ, ಸ್ವಂತ ಉದ್ಯಮ ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿ ನೀಡಲಾಗುವುದು.
ಆಸಕ್ತರು ಫೆ. 12ರೊಳಗೆ ಅರ್ಜಿ ಸಲ್ಲಿಸಬೇಕು. 21ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳಾಗಿರಬೇಕು. ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಮಹಿಳೆಯರಿಗೆ ಹಾಗೂ ಯುವನಿಧಿ ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಕೊಠಡಿ ಸಂಖ್ಯೆ ನಂ. 208, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಿಡಾಕ್, ಜಿಲ್ಲ್ಲಾ ಕೌಶಲಾಭಿವೃದ್ಧಿ ಕಚೇರಿ, ಕಂದಾಯ ಭವನ, ಬೆಂಗಳೂರು ದಕ್ಷಿಣ ಜಿಲ್ಲೆ, ರಾಮನಗರ-562159. ಈ ಕಚೇರಿಯಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ; 7090299843, 7760145784 ಸಂಪರ್ಕಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.