ADVERTISEMENT

ಶವಸಂಸ್ಕಾರದ ವೇಳೆ ಜೇನು ದಾಳಿ

​ಪ್ರಜಾವಾಣಿ ವಾರ್ತೆ
Published 21 ಮೇ 2019, 13:25 IST
Last Updated 21 ಮೇ 2019, 13:25 IST
ಜೇನು ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು
ಜೇನು ದಾಳಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳು   

ರಾಮನಗರ: ತಾಲೂಕಿನ ಅಂಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಶವಸಂಸ್ಕಾರ ಮಾಡುವ ವೇಳೆಯಲ್ಲಿ ಹೆಜ್ಜೇನು ದಾಳಿಯಿಂದಾಗಿ ಹದಿನೈದಕ್ಕೂ ಹೆಚ್ಚು ಮಂದಿ ಗಾಯಗೊಂಡರು.

ಅಂಕನಹಳ್ಳಿ ಗ್ರಾಮದ ಡೈರಿ ಶಿವಲಿಂಗಯ್ಯ (70) ಎಂಬುವರು ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದರು. ಮಧ್ಯಾಹ್ನ 2 ಗಂಟೆ ವೇಳೆಗೆ ಗ್ರಾಮದ ತೋಟದಲ್ಲಿ ಅಂತ್ಯಕ್ರಿಯೆಗೆ ಏರ್ಪಾಡು ಮಾಡಲಾಗಿತ್ತು. ಶವ ಹೊತ್ತು ಮೆರವಣಿಗೆ ಮೂಲಕ ಜನರು ತೋಟದ ಬಳಿ ಬಂದಾಗ ಹೆಜ್ಜೇನುಗಳು ದಾಳಿ ನಡೆಸಿದವು.

ಘಟನೆಯಲ್ಲಿ ಲತಾ, ಪುಟ್ಟಸ್ವಾಮಣ್ಣ, ಸತೀಶ್, ಅಂಕೇಗೌಡ, ಪ್ರಭು, ಚನ್ನಂಕೇಗೌಡ, ಪಾಂಡು, ಜಯಲಿಂಗಯ್ಯ, ಅಂಕೂಗೌಡ ಮೊದಲಾದವರು ಗಾಯಗೊಂಡರು. ಇವರಲ್ಲಿ ಐದಾರು ಜನರಿಗೆ ತೀವ್ರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.

ADVERTISEMENT

ಮಧ್ಯಾಹ್ನ 4 ಗಂಟೆ ಸುಮಾರಿಗೆ ಗ್ರಾಮಸ್ಥರು ತೆಂಗಿನ ಗರಿಗಳಿಗೆ ಬೆಂಕಿ ಹಚ್ಚಿಕೊಂಡು ತೋಟಕ್ಕೆ ತೆರಳಿ ಶವ ಸಂಸ್ಕಾರ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.