
ಪ್ರಜಾವಾಣಿ ವಾರ್ತೆ
ರಾಮನಗರ: ಬೆಂಗಳೂರು-ಮೈಸೂರು ನಡುವಿನ ದಶಪಥಗಳ ಹೆದ್ದಾರಿಯನ್ನು ಫೆಬ್ರುವರಿ ಅಂತ್ಯದಲ್ಲಿ ಉದ್ಘಾಟಿಸಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದರು.
ಹೆದ್ದಾರಿ ಕಾಮಗಾರಿ ವೀಕ್ಷಣೆ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಉದ್ಘಾಟನಾ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಇಲ್ಲವೇ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಲಾಗುವುದು ಎಂದರು.
ಹೊಸ ಹೆದ್ದಾರಿಯು ಕರ್ನಾಟಕದ ಆರ್ಥಿಕ ಪ್ರಗತಿಗೆ ಹೊಸ ಭಾಷ್ಯ ಬರೆಯಲಿದೆ. ಕೈಗಾರಿಕೆಗಳ ಪ್ರಗತಿಗೆ ಅನುಕೂಲ ಆಗಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.