ADVERTISEMENT

ಚನ್ನಪಟ್ಟಣ | ಮರಕ್ಕೆ ಕಾರು ಡಿಕ್ಕಿ: ಬೆಂಗಳೂರು ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 11 ಮೇ 2025, 23:17 IST
Last Updated 11 ಮೇ 2025, 23:17 IST
ಚನ್ನಪಟ್ಟಣ ತಾಲ್ಲೂಕಿನ ಪಾಂಡವಪುರ ಗ್ರಾಮದ ಬಳಿ ಮರಕ್ಕೆ ಗುದ್ದಿ ನಜ್ಜುಗುಜ್ಜಾಗಿರುವ ಕಾರು
ಚನ್ನಪಟ್ಟಣ ತಾಲ್ಲೂಕಿನ ಪಾಂಡವಪುರ ಗ್ರಾಮದ ಬಳಿ ಮರಕ್ಕೆ ಗುದ್ದಿ ನಜ್ಜುಗುಜ್ಜಾಗಿರುವ ಕಾರು   

ಚನ್ನಪಟ್ಟಣ: ತಾಲ್ಲೂಕಿನ ಪಾಂಡವಪುರ ಬಳಿ ಭಾನುವಾರ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಬೆಂಗಳೂರಿನ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಬೆಂಗಳೂರಿನ ಹೆಬ್ಬಾಳದ ಮೋಹನ್ (21) ಮೃತಪಟ್ಟ ಯುವಕ. ನಾಲ್ವರು ಸ್ನೇಹಿತರೊಂದಿಗೆ ಕಬ್ಬಾಳು ದೇವಸ್ಥಾನಕ್ಕೆ ಹೋಗಿ ವಾಪಸ್ ಬೆಂಗಳೂರಿಗೆ ತೆರಳುವ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆಯಿತು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.

ಜೊತೆಯಲ್ಲಿದ್ದ ನಾಲ್ವರು ಸ್ನೇಹಿತರಿಗೆ ತೀವ್ರ ಗಾಯಗಳಾಗಿವೆ. ಗಾಯಗೊಂಡವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳಿಸಲಾಗಿದೆ. 

ADVERTISEMENT

ವಿಷಯ ತಿಳಿದು ಸ್ಥಳಕ್ಕೆ ಅಕ್ಕೂರು ಪೊಲೀಸರು ಆಗಮಿಸಿ ಮೃತದೇಹವನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದರು. ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ತಾಲ್ಲೂಕಿನ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಭಾನುವಾರ ಇದೇ ರಸ್ತೆಯ ಅಮ್ಮಳ್ಳಿದೊಡ್ಡಿ ಗ್ರಾಮದ ಬಳಿ ಸಂಜೆ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದು ಮೂರು ಮಂದಿ ಸಾವನ್ನಪ್ಪಿ, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಾಲ್ವರು ಸ್ನೇಹಿತರು ಕಬ್ಬಾಳು ದೇಗುಲಕ್ಕೆ ಹೋಗಿ ಸಂಜೆ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿತ್ತು. ಇದೇ ರೀತಿಯ ಘಟನೆ ಇಂದು ಸಹ ನಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.