ADVERTISEMENT

ಬಿಡದಿ: ಅಡುಗೆ ಅನಿಲ ಸೋರಿಕೆ- ಗಾಯಗೊಂಡ ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2024, 16:06 IST
Last Updated 12 ಆಗಸ್ಟ್ 2024, 16:06 IST
ಮೃತ ನಂಜಮ್ಮ
ಮೃತ ನಂಜಮ್ಮ   

ಬಿಡದಿ: ಅಡುಗೆ ಅನಿಲ ಸಿಲಿಂಡರ್‌ ಸೋರಿ ಗಾಯಗೊಂಡಿದ್ದ ಕೇತಗಾನಹಳ್ಳಿ ರಸ್ತೆಯ ರಾಘವೇಂದ್ರ ಬಡಾವಣೆಯ ನಿವಾಸಿ ನಂಜಮ್ಮ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದರು. 

ಭಾನುವಾರ ಬೆಳಿಗ್ಗೆ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಮನೆಗೆ ಬೆಂಕಿ ಬಿದ್ದು ಗೃಹೋಪಯೋಗಿ ವಸ್ತುಗಳು ಹಾಗೂ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಹೋಗಿದ್ದವು. ಈ ವೇಳೆಯಲ್ಲಿ ಗಾಯಗೊಂಡಿದ್ದ 65 ವರ್ಷದ ನಂಜಮ್ಮ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಹೆಚ್ಚಿನ ಚಿಕಿತ್ಸೆಗಾಗಿ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ನಂಜಮ್ಮ ಸಾವನ್ನಪ್ಪಿದ್ದಾರೆ. ಮೃತರಿಗೆ ಮೂರು ಗಂಡು ಮಕ್ಕಳಿದ್ದಾರೆ. ಸ್ವಗ್ರಾಮದಲ್ಲಿ ಶವ ಸಂಸ್ಕಾರ ಮಾಡಲಾಯಿತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.