ADVERTISEMENT

ಬಿಡದಿ: ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಿವಿಮಾತು

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 2:56 IST
Last Updated 20 ಜುಲೈ 2025, 2:56 IST
ರಾಮನಗರ ತಾಲ್ಲೂಕಿನ ಬಿಡದಿ ಬಸವೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರು ಮಂದಿ ವಿದ್ಯಾರ್ಥಿಗಳನ್ನು ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಅಭಿನಂದಿಸಿದರು
ರಾಮನಗರ ತಾಲ್ಲೂಕಿನ ಬಿಡದಿ ಬಸವೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರು ಮಂದಿ ವಿದ್ಯಾರ್ಥಿಗಳನ್ನು ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ಅಭಿನಂದಿಸಿದರು   

ಬಿಡದಿ (ರಾಮನಗರ): ವಿದ್ಯಾರ್ಥಿಗಳು ಪ್ರೌಢಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ಮೂಲಕ ಶೈಕ್ಷಣಿಕ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಮಾಜಿ ಶಾಸಕ ಹಾಗೂ ಜ್ಞಾನವಿಕಾಸ್ ವಿದ್ಯಾ ಸಂಘದ ಅಧ್ಯಕ್ಷ ಸಿ.ಎಂ.ಲಿಂಗಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಬಿಡದಿ ಹೋಬಳಿ ಜ್ಞಾನ ವಿಕಾಸ್ ವಿದ್ಯಾ ಸಂಘದ ಆಶ್ರಯದಲ್ಲಿ ನಡೆದ ಬಸವೇಶ್ವರಸ್ವಾಮಿ ಗ್ರಾಮಾಂತರ ಪ್ರೌಢಶಾಲೆ ಎನ್ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಆರು ಮಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.

ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ವತಿಯಿಂದ ನಡೆಯುವ ಬಡತನ ರೇಖೆಯಲ್ಲಿರುವ ಪ್ರತಿಭಾವಂತ ಎಂಟನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಆರ್ಥಿಕ ನೆರವು ನೀಡುವ ಎನ್ಎಂಎಂಎಸ್ (ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್‌ಶಿಫ್‌ ಸ್ಕೀಮ್) ಪರೀಕ್ಷೆಗೆ 2024-25ನೇ ಸಾಲಿಗೆ ತಾಲ್ಲೂಕಿನ ಎಲ್ಲ ಪ್ರೌಢಶಾಲೆ ಹಾಗೂ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗಳಿಂದ 8ನೇ ತರಗತಿಗೆ 17 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಆಯ್ಕೆಯಾಗಿದ್ದರು. ಇದರಲ್ಲಿ ಬಸವೇಶ್ವರಸ್ವಾಮಿ ಗ್ರಾಮಾಂತರ ಪ್ರೌಢ ಶಾಲೆಯೊಂದರಲ್ಲೇ ಆರು ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದು ಹೆಮ್ಮೆ ವಿಚಾರ ಎಂದು ತಿಳಿಸಿದರು.

ADVERTISEMENT

ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲ ವಿದ್ಯಾರ್ಥಿಗಳಿಗೆ 9ನೇ ತರಗತಿಯಿಂದ ದ್ವಿತೀಯ ಪಿಯುವರೆಗೆ 4 ವರ್ಷಗಳ ಅವಧಿಯಲ್ಲಿ ವಾರ್ಷಿಕ ₹12,000 ನೇರವಾಗಿ ವಿದ್ಯಾರ್ಥಿಗಳಿಗೆ ಖಾತೆಗೆ ಜಮೆಯಾಗಲಿದೆ ಎಂದು ತಿಳಿಸಿದರು.

ಆಡಳಿತ ಮಂಡಳಿ ಪದಾಧಿಕಾರಿಗಳಾದ ಎಲ್.ಸತೀಶ್, ಚಂದ್ರ, ಬಿ.ಎನ್.ಗಂಗಾಧರಯ್ಯ, ಸಿ.ಲೋಕೇಶ್ ಮುಖ್ಯ ಶಿಕ್ಷಕರಾದ ಆರ್.ಎಸ್.ಗಿರೀಶ್ ಹಾಗೂ ಶಾಲಾ ಸಿಬ್ಬಂದಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.