
ಪ್ರಜಾವಾಣಿ ವಾರ್ತೆಅಪಘಾತ
–ಪ್ರಾತಿನಿಧಿಕ ಚಿತ್ರ
ಕುದೂರು: ರಾಷ್ಟ್ರೀಯ ಹೆದ್ದಾರಿ 75ರ ರಸ್ತೆಪಾಳ್ಯ ಸಮೀಪದ ಗಾಂಧಿ ಫಾರ್ಮ್ ಬಳಿ ಭಾನುವಾರ ಬೆಳಿಗ್ಗೆ ದ್ವಿಚಕ್ರ ವಾಹನವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬೆಂಗಳೂರು ನಗರದ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಹಾಸನ ಕಡೆಯಿಂದ ನೆಲಮಂಗಲ ಕಡೆಗೆ ವೇಗವಾಗಿ ಬಂದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಬೆಂಗಳೂರು ನಗರದ ನಿವಾಸಿಗಳಾದ ಕೇಶವ ಪ್ರಸಾದ್ (21) ಮಯೂರ್ (20) ಮೃತಪಟ್ಟಿದ್ದಾರೆ.
ಮೃತದೇಹಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಕುದೂರು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.