ADVERTISEMENT

ಮಾಗಡಿ | ಕಾರು ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 15:55 IST
Last Updated 8 ಏಪ್ರಿಲ್ 2025, 15:55 IST
   

ಮಾಗಡಿ: ಪಟ್ಟಣದ ಕಲ್ಯಾ ವೃತ್ತದ ಮಾಗಡಿ- ಕುಣಿಗಲ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಕಾರು ಮತ್ತು ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಲ್ಲೂಕಿನ ಶ್ರೀಪತಿಹಳ್ಳಿ ದೇವರಹಟ್ಟಿ ಗ್ರಾಮದ ಕೆ. ನವೀನ್ ಕುಮಾರ್(25) ಮೃತರು.

ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಕಾರು ವೇಗ ನಿಯಂತ್ರಣ ತಪ್ಪಿ ಕುಣಿಗಲ್ ಕಡೆಯಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ‌ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು ಎಂದು ಮಾಗಡಿ ಠಾಣೆ ಪೊಲೀಸರು ತಿಳಿಸಿದರು.

ಕಾರಿನಲ್ಲಿ ಇದ್ದವರು ಹಾಸನಕ್ಕೆ ತೆರಳುತ್ತಿದ್ದು, ರಸ್ತೆ ಕೆಲಸ ಮಾಡುವರರು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಕಾರು ಮತ್ತು ಬೈಕ್ ನಜ್ಜುಗುಜ್ಜಾಗಿವೆ. ಘಟನೆ ಕುರಿತು ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.