ADVERTISEMENT

ಬಿಳಗುಂಬ ಗ್ರಾ.ಪಂ: ಪಾಪಣ್ಣ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 6 ಮೇ 2019, 12:56 IST
Last Updated 6 ಮೇ 2019, 12:56 IST
ಬಿಳಗುಂಬ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಪಾಪಣ್ಣ ಅವರನ್ನು ಸದಸ್ಯರು, ಮುಖಂಡರು ಅಭಿನಂದಿಸಿದರು
ಬಿಳಗುಂಬ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷ ಪಾಪಣ್ಣ ಅವರನ್ನು ಸದಸ್ಯರು, ಮುಖಂಡರು ಅಭಿನಂದಿಸಿದರು   

ರಾಮನಗರ: ಇಲ್ಲಿನ ಬಿಳಗುಂಬ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಾಪಣ್ಣ ಆಯ್ಕೆಯಾದರು.

ಎನ್.ರಮೇಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ, ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಚುನಾವಣೆ ನಡೆಯಿತು. ಹೊಂಬಯ್ಯನದೊಡ್ಡಿ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಸದಸ್ಯ ಪಾಪಣ್ಣ ಮತ್ತು ಜಯಪುರ ಕ್ಷೇತ್ರದ ಜೆಡಿಎಸ್ ಬೆಂಬಲಿತ ಸದಸ್ಯ ಬೋರೇಗೌಡ ನಾಮಪತ್ರ ಸಲ್ಲಿಸಿದ್ದರು.

18 ಸದಸ್ಯ ಬಲವಿರುವ ಬಿಳಗುಂಬ ಗ್ರಾಮ ಪಂಚಾಯಿತಿಯಲ್ಲಿ ಎಲ್ಲ ಸದಸ್ಯರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು. ಪಾಪಣ್ಣ 10 ಮತ, ಬೋರೇಗೌಡ 8 ಮತ ಪಡೆದರು. 2 ಮತಗಳ ಅಂತರದಿಂದ ಬಿಳಗುಂಬ ಪಂಚಾಯಿತಿ ಅಧ್ಯಕ್ಷರಾಗಿ ಪಾಪಣ್ಣ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಿ.ಎನ್. ಮರೀಗೌಡ ಘೋಷಿಸಿದರು. ಪಿಡಿಓ ಎಂ. ರಾಜೇಗೌಡ ಇದ್ದರು.

ADVERTISEMENT

ಎಲ್ಲಾ ಸದಸ್ಯರ ಸಹಕಾರ ಪಡೆದು ಪಕ್ಷಾತೀತವಾಗಿ 12 ಗ್ರಾಮಗಳಿಗೂ ಮೂಲಭೂತ ಸೌಕರ್ಯ ಮತ್ತು ಸರ್ಕಾರದ ಸವಲತ್ತುಗಳನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ನೂತನ ಅಧ್ಯಕ್ಷ ಪಾಪಣ್ಣ ತಿಳಿಸಿದರು.

ಅಭಿನಂದನೆ: ನೂತನ ಅಧ್ಯಕ್ಷರನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಚಮ್ಮ, ಸದಸ್ಯರಾದ ವೆಂಕಟೇಶ್, ಮೀನಾಕ್ಷಿ, ಭಾಗ್ಯಮ್ಮ, ಲಕ್ಷ್ಮಮ್ಮ, ಚಿಕ್ಕತಾಯಮ್ಮ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಭು, ಮುಖಂಡರಾದ ಸಿದ್ದೇಗೌಡ (ರವಿ), ಬಿ.ವಿ.ರಾಜೇಂದ್ರ, ರಘು, ಶಾಂತಯ್ಯ, ನವೀನ್‍ ಗೌಡ, ಕಾಂತರಾಜು, ಶಿವರಾಜು ಅಭಿನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.