ADVERTISEMENT

ಹುಟ್ಟುಹಬ್ಬ ಆಚರಣೆ: ವಿದ್ಯಾರ್ಥಿಗಳಿಗೆ ಬಸ್ಕಿ ಹೊಡೆಸಿ ಪೊಲೀಸರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 11 ಜೂನ್ 2021, 4:26 IST
Last Updated 11 ಜೂನ್ 2021, 4:26 IST

ಚನ್ನಪಟ್ಟಣ: ಲಾಕ್‌ಡೌನ್ ನಡುವೆಯೂ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆಯಲ್ಲಿ ತೊಡಗಿದ್ದ ಕಾಲೇಜು ವಿದ್ಯಾರ್ಥಿಗಳನ್ನು ಪೊಲೀಸರು ಕರೆತಂದು ಅಕ್ಕೂರು ಠಾಣೆ ಮುಂಭಾಗ ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಚನ್ನಪಟ್ಟಣ ಮತ್ತು ರಾಮನಗರದ ಕಾಲೇಜಿನ ಹಲವು ವಿದ್ಯಾರ್ಥಿಗಳು ಸ್ನೇಹಿತನ ಹುಟ್ಟುಹಬ್ಬ ಆಚರಿಸಿಕೊಳ್ಳಲು, ಬೈಕ್‌ಗಳಲ್ಲಿ ಅಕ್ಕೂರು ಠಾಣಾ ವ್ಯಾಪ್ತಿಯ ತೋಟವೊಂದರಲ್ಲಿ ಸೇರಿದ್ದರು.

ಮಾಹಿತಿ ಆಧರಿಸಿ ಗ್ರಾಮಾಂತರ ಠಾಣೆಯ ಸರ್ಕಲ್ ಇನ್‌ಸ್ಪೆಕ್ಟರ್ ಶಿವಕುಮಾರ್ ಮಾರ್ಗದರ್ಶನದಲ್ಲಿ ಸಬ್ ಇನ್‌ಸ್ಪೆಕ್ಟರ್ ಸರಸ್ವತಿ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಅಲ್ಲಿದ್ದ ವಿದ್ಯಾರ್ಥಿಗಳನ್ನು ಠಾಣೆಗೆ ಕರೆತಂದು ಬಸ್ಕಿ ಹೊಡೆಸಿ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

ADVERTISEMENT

ಅಲ್ಲಿದ್ದ ಎಲ್ಲರೂ ವಿದ್ಯಾರ್ಥಿಗಳು ಆಗಿದ್ದ ಕಾರಣ ಅವರ ಶೈಕ್ಷಣಿಕ ಪ್ರಗತಿಗೆ ಯಾವುದೇ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಅವರ ಮೇಲೆ ಯಾವುದೇ ಮೊಕದ್ದಮೆ ದಾಖಲಿಸಿಲ್ಲ. ಕೇವಲ ಬಸ್ಕಿ ಹೊಡೆಸಿ, ಎಚ್ಚರಿಕೆ ನೀಡಲಾಗಿದೆ ಎಂದು ಸರಸ್ವತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.