ADVERTISEMENT

ಸಿದ್ದರಾಮಯ್ಯ ಕ್ಷಮೆಯಾಚನೆಗೆ ಬಿಜೆಪಿ ಜಿಲ್ಲಾ ಘಟಕ ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2021, 7:27 IST
Last Updated 8 ನವೆಂಬರ್ 2021, 7:27 IST
ದಿ ಭಾರತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಸಭೆಯನ್ನು ಅಧ್ಯಕ್ಷ ಚಂದ್ರಯ್ಯ ಉದ್ಘಾಟಿಸಿದರು. ನಾಗಭೂಷಣಯ್ಯ, ಉಪಾಧ್ಯಕ್ಷ ಸಿ. ಸೋಮೇಗೌಡ, ದೊಡ್ಡವೀರಯ್ಯ, ಆರ್. ಚಿಕ್ಕಭೈರೇಗೌಡ, ದೊರೆಸ್ವಾಮಿ ಇದ್ದರು
ದಿ ಭಾರತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ವಾರ್ಷಿಕ ಸಭೆಯನ್ನು ಅಧ್ಯಕ್ಷ ಚಂದ್ರಯ್ಯ ಉದ್ಘಾಟಿಸಿದರು. ನಾಗಭೂಷಣಯ್ಯ, ಉಪಾಧ್ಯಕ್ಷ ಸಿ. ಸೋಮೇಗೌಡ, ದೊಡ್ಡವೀರಯ್ಯ, ಆರ್. ಚಿಕ್ಕಭೈರೇಗೌಡ, ದೊರೆಸ್ವಾಮಿ ಇದ್ದರು   

ಚನ್ನಪಟ್ಟಣ: ದಲಿತ ಸಮುದಾಯದವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಷರತ್ ಕ್ಷಮೆ ಯಾಚಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಚಕ್ಕಲೂರು ಚೌಡಯ್ಯ ಎಚ್ಚರಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ದಲಿತ ಸಮುದಾಯದವರು ತಮ್ಮ ಹೊಟ್ಟೆಪಾಡಿಗಾಗಿ ಹಾಗೂ ರಾಜಕೀಯ, ಆರ್ಥಿಕ ಉನ್ನತ ಹುದ್ದೆಯ ಆಸೆಗಾಗಿ ಬಿಜೆಪಿಯ ಬಾಗಿಲಿಗೆ ತೆರಳಿದ್ದಾರೆ ಎಂದು ಹೇಳಿಕೆ ನೀಡಿರುವುದು ಸಿದ್ದರಾಮಯ್ಯ ಅವರ ಅಧಿಕಾರದ ದುರಾಸೆಯನ್ನು ತೋರಿಸುತ್ತದೆ. ಬೆಳೆಸಿದ ಪಕ್ಷವನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರಿರುವ ಅವರು ದಲಿತ ಸಮುದಾಯದ ಬಗ್ಗೆ ಹೇಳಿಕೆ ನೀಡುವ ಯೋಗ್ಯತೆ ಉಳಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.

ರಾಜಕೀಯದ ಸಿದ್ಧಾಂತ ತಿಳಿಯದ ಸಿದ್ದರಾಮಯ್ಯ ದಲಿತರನ್ನು ಅವಮಾನಿಸಿದ್ದಾರೆ. ಬಿಜೆಪಿ ಆಡಳಿತ ಹಾಗೂ ಸಂಘಟನೆಯನ್ನು ಸಹಿಸಲಾರದ ಅವರು ಕಪಟ ರಾಜಕಾರಣ ಮಾಡಲು ಮುಂದಾಗಿದ್ದಾರೆ. ಈಗ ದಲಿತರನ್ನು ಅವಮಾನಿಸಲು ಮುಂದಾಗುತ್ತಿದ್ದಾರೆ. ಸಿದ್ದರಾಮಯ್ಯ ದಲಿತ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.