ADVERTISEMENT

ಮೇಕೆದಾಟು ಯೋಜನೆಗೆ ಬಿಜೆಪಿ ಸರ್ಕಾರವೇ ಅಡ್ಡಿ: ಸುರ್ಜೇವಾಲ ಆರೋಪ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2022, 7:03 IST
Last Updated 27 ಫೆಬ್ರುವರಿ 2022, 7:03 IST
ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಚಾಲನೆ ಕಾರ್ಯಕ್ರಮ
ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಚಾಲನೆ ಕಾರ್ಯಕ್ರಮ   

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಬೆಂಗಳೂರಿನಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವೇ ಅಡ್ಡಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ ದೂರಿದರು.

ಇಲ್ಲಿನ ಟಿ.ಆರ್.‌ಮಿಲ್ ಮೈದಾನದಲ್ಲಿ ಭಾನುವಾರ ಮೇಕೆದಾಟು ಎರಡನೇ ಹಂತದ ಪಾದಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕಾವೇರಿ ನೀರಿನ ಪ್ರತಿ ಹನಿ ಮೇಲೂ ಇಲ್ಲಿನ ಜನರ ಹಕ್ಕು ಇದೆ. ಅದನ್ನು ಕೊಡಿಸಲು ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಮೇಕೆದಾಟು ವಿಚಾರದಲ್ಲಿ ಕಾನೂನಾತ್ಮಕವಾಗಿ ಯಾವುದೇ ಅಡೆತಡೆ ಇಲ್ಲ. ಆದರೆ ಡಬಲ್ ಎಂಜಿನ್ ಸರ್ಕಾರ ಬೇಕಂತಲೇ ವಿಳಂಬ ಮಾಡುತ್ತಿದೆ. ತಮಿಳುನಾಡು ಸಹ ರಾಜಕೀಯ ಕಾರಣಕ್ಕೆ ವಿರೋಧಿಸುತ್ತದೆ ಎಂದು ದೂರಿದರು.

ADVERTISEMENT

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಮುಖ್ಯಮಂತ್ರಿಗಳು ಇನ್ನೆರಡು ದಿನದಲ್ಲಿ ಯೋಜನೆಗೆ ಕೇಂದ್ರದ ಅನುಮತಿ‌ ಪಡೆದರೆ, ನಾವೇ ಅವರಿಗೆ ಹಾರ ಹಾಕಿ ಗುದ್ದಲಿ‌ ಹಿಡಿದು ಯೋಜನೆಗೆ ಚಾಲನೆ ಕೊಡಿಸುತ್ತೇವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.