ADVERTISEMENT

ಬೆ.ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲೂ ಮತ ಕಳ್ಳತನ ಶಂಕೆ: ವಿನಯಕುಮಾರ್ ಸೊರಕೆ ಆರೋಪ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 9:00 IST
Last Updated 1 ಸೆಪ್ಟೆಂಬರ್ 2025, 9:00 IST
ವಿನಯಕುಮಾರ್ ಸೊರಕೆ
ವಿನಯಕುಮಾರ್ ಸೊರಕೆ   

ರಾಮನಗರ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಮಹಾರಾಷ್ಟ್ರದಲ್ಲಿ ಮತ ಕಳ್ಳತನ ಮಾಡಿರುವಂತೆ, ರಾಜ್ಯದಲ್ಲಿ ಡಿ.ಕೆ. ಸುರೇಶ್ ಅವರ ಕ್ಷೇತ್ರವಾದ ಬೆಂಗಳೂರು ಗ್ರಾಮಾಂತರದಲ್ಲೂ ಮತ ಕಳ್ಳತನ ನಡೆಸಿರುವ ಅನುಮಾನ ಇದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಮಹದೇವಪುರ‌ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವ ಮಾದರಿಯಲ್ಲಿ ಇಲ್ಲೂ ನಡೆದಿದೆ ಎಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿದ್ದಾರೆ.‌ ಈ ಬಗ್ಗೆ ಬೂತ್ ಮಟ್ಟದಿಂದ ಮತದಾರರ ಪಟ್ಟಿ ಸಂಗ್ರಹಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.

ಒಂದು ವೇಳೆ ಅಕ್ರಮ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಹೋರಾಟ ನಡೆಸಲಾಗುವುದು ಎಂದರು.

ADVERTISEMENT

ಅಕ್ರಮಕ್ಕೆ ಆರ್.ಒ.ಗಳನ್ನು ಬಳಕೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಹಲವು ಕ್ಷೇತ್ರಗಳಲ್ಲಿ ಐದಾರು ವರ್ಷಗಳಿಂದ ಆರ್.ಒ.ಗಳು ಬದಲಾಗದೆ ಮುಂದುವರಿದುಕೊಂಡು ಬಂದಿದ್ದಾರೆ. ಹಾಗಾಗಿ ಅವರನ್ನೇ ಬಳಸಿಕೊಂಡು ಬಿಜೆಪಿಯವರು ಮತ ಕಳ್ಳತನ ನಡೆಸಿದ್ದಾರೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.