
ಪ್ರಜಾವಾಣಿ ವಾರ್ತೆ
ರಾಮನಗರ: ಹಾನಗಲ್ ಹಾಗೂ ಸಿಂದಗಿ ಎರಡೂ ಕಡೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳೇ ಗೆಲ್ಲಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಸೋಮವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ಉಪಚುನಾವಣೆಯಲ್ಲಿ ಬಿಜೆಪಿ ಹಣ ಹಂಚಿದೆ ಎಂಬ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿ ' ಹಣ ಹಂಚುವುದು ಕಾಂಗ್ರೆಸ್ ಸಂಸ್ಕೃತಿ. ಹತಾಶೆಯಿಂದ ಅವರು ಹೇಳಿಕೆ ನೀಡುತ್ತಿದ್ದಾರೆ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.