ADVERTISEMENT

ಸಂಸದ ಡಿ.ಕೆ. ಸುರೇಶ್ ಬಂಧನಕ್ಕೆ ಒತ್ತಾಯಿಸಿ ರಾಮನಗರದಲ್ಲಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 7:31 IST
Last Updated 4 ಜನವರಿ 2022, 7:31 IST
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು   

ರಾಮನಗರ: ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಅನುಚಿತವಾಗಿ ವರ್ತಿಸಿದ ಸಂಸದ ಡಿ.ಕೆ. ಸುರೇಶ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಜಿಲ್ಲಾ ಕಚೇರಿಗಳ ಸಂಕೀರ್ಣದ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು ಅಲ್ಲಿಯೇ ಧರಣಿ ಕುಳಿತರು. ಪ್ರತಿಭಟನೆ ಕೈಬಿಡುವಂತೆ ಪೊಲೀಸರು‌ ಮಾಡಿದ ಮನವಿಗೂ ಬಗ್ಗಲಿಲ್ಲ.

ಒಬ್ಬ ಜವಾಬ್ದಾರಿಯುತ ಸಂಸದರಾಗಿ ಮುಖ್ಯಮಂತ್ರಿ ಎದುರು ಹೇಗೆ ವರ್ತಿಸಬೇಕು ಎಂಬ ಪರಿಜ್ಞಾನವೂ ಇಲ್ಲ. ಮಂತ್ರಿಯೊಬ್ಬರು ಮಾತನಾಡುತ್ತಿರುವಾಗ ಮೈಕ್ ಕಸಿದು ಹಲ್ಲೆಗೆ ಮುಂದಾಗಿದ್ದಾರೆ. ಇಂತಹ ಗೂಂಡಾ ಸಂಸ್ಕೃತಿಯ ವ್ಯಕ್ತಿಯನ್ನು ಬಂಧಿಸಬೇಕು' ಎಂದು ಆಗ್ರಹಿಸಿದರು.

ADVERTISEMENT

ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ದಲಿತ ವಿರೋಧಿ ವರ್ತನೆ ತೋರಿದೆ. ನಿನ್ನೆ ಪ್ರತಿಭಟನೆ ಸಂಬಂಧ ಬಂಧಿಸಲ್ಪಟ್ಟವರೆಲ್ಲರೂ ದಲಿತರೇ ಆಗಿದ್ದಾರೆ. ದಲಿತರನ್ನು ಕಾಂಗ್ರೆಸ್ ಕೇವಲ‌ ಪ್ರತಿಭಟನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಹುಲುವಾಡಿ ದೇವರಾಜು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.