ಚನ್ನಪಟ್ಟಣ: ತಾಲ್ಲೂಕಿನ ಮಾಕಳಿ ಗ್ರಾಮದ ಗ್ರಾ.ಪಂ.ಮಾಜಿ ಅಧ್ಯಕ್ಷ ಲೋಕೇಶ್ ಅವರ ಮೃತದೇಹ ಕಣ್ವ ಜಲಾಶಯದ ಬಳಿ ಮಂಗಳವಾರ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ಕೃಷ್ಣಾಪುರದೊಡ್ಡಿ ಗ್ರಾಮದ ಹತ್ತಿರದ ಕಣ್ವ ಜಲಾಶಯದ ಬಳಿ ಲೋಕೇಶ್ ಅವರ ಕಾರು ನಿಂತಿದ್ದು, ಕಾರಿನ ಪಕ್ಕದಲ್ಲಿದ್ದ ಮೃಹ ದೇಹದ ಬಳಿ ವಿಷದ ಬಾಟಲಿ ದೊರೆತಿದೆ. ಹಾಗಾಗಿ ಇದು ಆತ್ಮಹತ್ಯೆ ಇರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಲೋಕೇಶ್ ಅವರು ಸೋಮವಾರದಿಂದ ಕಾಣೆಯಾಗಿದ್ದರು. ಮನೆಯಿಂದ ಹೊರ ಹೋಗಿದ್ದವರು ವಾಪಸ್ ಮನೆಗೆ ಬಂದಿರಲಿಲ್ಲ. ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿರುವ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಮೃತದೇಹವನ್ನು ಲೋಕೇಶ್ ಎಂದು ಗುರುತಿಸಲಾಗಿದೆ. ನಂತರ ಪೊಲೀಸರು ಮನೆಯವರಿಗೆ ವಿಷಯ ತಿಳಿಸಿ ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ನೀಡಿದ್ದಾರೆ.
ತಾಲ್ಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.