
ಬಿಡದಿ (ರಾಮನಗರ): ಪಟ್ಟಣದ ಪುರಸಭೆಯ ನೌಕರರ ವೇತನ ವ್ಯತ್ಯಾಸದ ಬಾಕಿ ಮೊತ್ತ ₹1.89 ಕೋಟಿಯನ್ನು ಕಾನೂನುಬಾಹಿರವಾಗಿ ಪಾವತಿಸಿ ಅದಕ್ಕಾಗಿ ನೌಕರರಿಂದ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಪುರಸಭೆ ಮುಖ್ಯಾಧಿಕಾರಿ ಮೀನಾಕ್ಷಿ ಎಂ. ಮತ್ತು ವಾರ್ಡ್–13ರ ಕಾಂಗ್ರೆಸ್ ಸದಸ್ಯ ಉಮೇಶ್ ವಿರುದ್ಧ ತನಿಖೆಗೆ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.
ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ-4 ನಾಗೇಂದ್ರ ಪ್ರಸಾದ್ ಹೊನ್ನಳ್ಳಿ, ಅಧೀನ ಕಾರ್ಯದರ್ಶಿ ಲತಾ .ಕೆ ಮತ್ತು ಪೌರಾಡಳಿತ ನಿರ್ದೇಶನಾಲಯದ ಕೇಂದ್ರ ಸ್ಥಾನಿಕ ಸಹಾಯಕ ಅಮೀತ್ ತರದಾಳೆ ಅವರನ್ನು ಒಳಗೊಂಡ ತನಿಖಾ ತಂಡವನ್ನು ಇಲಾಖೆ ಇತ್ತೀಚೆಗೆ ರಚಿಸಿದೆ.
ಬಿಡದಿ ಪುರಸಭೆಗೆ ಭೇಟಿ ನೀಡಿದ ತಂಡವು ನಿಯಮಾನುಸಾರ ಪರಿಶೀಲಿಸಿ 15 ದಿನಗಳ ಒಳಗಾಗಿ ದಾಖಲೆಗಳೊಂದಿಗೆ ತನಿಖಾ ವರದಿ ನೀಡಬೇಕು ಎಂದು ನಗರಾಭಿವೃದ್ಧಿ ಇಲಾಖೆ ಆದೇಶದಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.