
ಕನಕಪುರ: ಪೌತಿ ಖಾತೆ ಮಾಡಿಕೊಡಲು ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿರುವ ಕಂದಾಯ ಅಧಿಕಾರಿಗಳಿಗೆ ಕಾನೂನು ರೀತಿ ಶಿಕ್ಷೆ ಆಗುವಂತೆ ಲೋಕಾಯುಕ್ತ ಅಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಜಯಕರ್ನಾಟಕ ಜನಪರ ವೇದಿಕೆ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಒತ್ತಾಯಿಸಿದರು.
ನಗರದ ರಾಜಾರಾವ್ ರಸ್ತೆಯಲ್ಲಿರುವ ರೈತ ಸಂಘದ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಕಂದಾಯ ಅಧಿಕಾರಿಗಳ ಭ್ರಷ್ಟಾಚಾರ ಕುರಿತು ಮಾತನಾಡಿದರು.
ಕನಕಪುರ ತಾಲ್ಲೂಕಿನಲ್ಲಿ ಎಲ್ಲ ಇಲಾಖೆಗಳು ಭ್ರಷ್ಟಾಚಾರದಿಂದ ತುಂಬಿ ತುಳುಕುತ್ತಿವೆ. ಸಾರ್ವಜನಿಕ ಕೆಲಸ ಕಾರ್ಯಗಳು ಇಲ್ಲಿ ನಡೆಯುತ್ತಿಲ್ಲ. ಪ್ರತಿಯೊಂದಕ್ಕೂ ಲಂಚ ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಆರೋಪಿಸಿದರು.
ರೆವಿನ್ಯೂ ಇನ್‌ಸ್ಪೆಕ್ಟರ್ ತಂಗರಾಜು, ಗ್ರಾಮ ಲೆಕ್ಕಾಧಿಕಾರಿ ಚಂದ್ರೇಗೌಡ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದಿದ್ದಾರೆ. ಅವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸಿದರು.
ರೈತ ಸಂಘದ ಶಿವ ಸ್ವಾಮಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.