ADVERTISEMENT

ಚನ್ನಪಟ್ಟಣ: ಕೊಚ್ಚಿ ಹೋದ ಸೇತುವೆ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2022, 7:38 IST
Last Updated 7 ಆಗಸ್ಟ್ 2022, 7:38 IST
   

ರಾಮನಗರ: ಕಣ್ವ ನದಿ ನೀರಿನ ರಭಸಕ್ಕೆ ಚನ್ನಪಟ್ಟಣ ತಾಲ್ಲೂಕಿನ ಕೊಂಡಾಪುರ- ಬಾಣಗಹಳ್ಳಿ ಗ್ರಾಮಗಳ ನಡುವಿನ ಸಂಪರ್ಕ ಸೇತುವೆಯು ಭಾನುವಾರ ಕೊಚ್ಚಿ ಹೋಗಿದೆ.

ಕೆಲವು ವರ್ಷದ ಹಿಂದಷ್ಟೇ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಸದ್ಯ ಕಣ್ವ ಜಲಾಶಯ ಭರ್ತಿ ಆಗಿದ್ದು, ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದ ಹಿನ್ನೆಲೆಯಲ್ಲಿ ಸೇತುವೆಗೆ ಹಾನಿಯಾಗಿದೆ. ಕಳಪೆ ಕಾಮಗಾರಿಯಿಂದ ಸಾರ್ವಜನಿಕರು ಪರದಾಡುವಂತೆ ಆಗಿದ್ದು, ವಿವಿಧ ಗ್ರಾಮಗಳ ನಡುವೆ ಸಂಪರ್ಕ ಕಡಿತಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT