ರಾಮನಗರ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಎರಡು ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ನಗರದಲ್ಲಿ ಶುಕ್ರವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು 'ನಾಯಕತ್ವ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಕುಮಾರ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ. ಮುಖ್ಯಮಂತ್ರಿ ಅವರಿಗೆ ಪರ್ಯಾಯ ನಾಯಕ ಇರುವ ಕುರಿತು ನನಗೆ ತಿಳಿದಿಲ್ಲ' ಎಂದರು.
ಪೆಟ್ರೋಲ್ ದರ ಶತಕ ದಾಟಿರುವ ಕುರಿತು ಪ್ರತಿಕ್ರಿಯಿಸಿ 'ಕಚ್ಚಾ ತೈಲ ಬೆಲೆ ಏರಿಕೆ ಆಗಿರುವ ಕಾರಣ ಪೆಟ್ರೋಲ್ ಬೆಲೆಯೂ ಏರಿದೆ. ಇದು ರಾಷ್ಟ್ರದ ಸಮಸ್ಯೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ' ಎಂದರು.
ಇನ್ನಷ್ಟು ಸುದ್ದಿಗಳು
*ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ: ಬಿ.ಎಸ್.ಯಡಿಯೂರಪ್ಪ
*ವಿಜಯೇಂದ್ರ ಮಠ ಸುತ್ತಾಟ ಗುಟ್ಟು?
*ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ: ಅರುಣ್ ಸಿಂಗ್
*ರಾಜಕೀಯ ಮಾತು ನಿಲ್ಲಿಸಿ ಕೆಲಸ ಮಾಡಿ: ಸ್ವಪಕ್ಷಿಯರ ಮೇಲೆ ಬಿಎಸ್ವೈ ಸಿಡಿಮಿಡಿ
*ಹೈಕಮಾಂಡ್ ಹೇಳಿದರೆ ರಾಜೀನಾಮೆ; ರಾಜಕೀಯ ಸಂಚಲನ ತಂದ ಸಿಎಂ ಯಡಿಯೂರಪ್ಪ ಹೇಳಿಕೆ
*ಸುದ್ದಿ ವಿಶ್ಲೇಷಣೆ: ಸವಾಲು ಕೂಗಿದ ಬಿಎಸ್ವೈ!
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.