ಮಾಗಡಿ ತಾಲ್ಲೂಕಿನ ಸೋಲೂರು ರಾಷ್ಟ್ರೀಯ ಹೆದ್ದಾರಿ ಬಳಿ ನಿಂತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಕೆಎಸ್‌ಆರ್‌ಟಿಸಿ ಬಸ್
ಕುದೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ–75ರಲ್ಲಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಶನಿವಾರ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೂಡೆದು ಬಸ್ ಚಾಲಕ ಸೇರಿ ಸುಮಾರು 20ಕ್ಕೂ ಹೆಚ್ಚು ಪ್ರಮಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಸೋಲೂರು ಬಳಿ ಪಂಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಹಿಂಭಾಗಕ್ಕೆ ಚಿಕ್ಕಮಂಗಳೂರು ಕಡೆಯಿಂದ ಬೆಂಗಳೂರಿಗೆ ಹೊರಟಿದ್ದ ಅಶ್ವಮೇಧ ಬಸ್ ರಭಸದಿಂದ ಗುದ್ದಿದೆ.
ಬಸ್ ಮುಂಭಾಗ ಸಂಪೂರ್ಣ ಜಖಂ ಆಗಿದ್ದರಿಂದ ಚಾಲಕನ ರಕ್ಷಣೆ ಕಷ್ಟವಾಗಿತು. ಬಳಿಕ ಬೃಹತ್ ನಿರ್ಮಾಣ ಯಂತ್ರದ ಮೂಲಕ ಬಸ್ ಬೇಪರ್ಡಿಸಿ ಬಸ್ ಚಾಲಕನನ್ನು ರಕ್ಷಣೆ ಮಾಡಲಾಯಿತು.
ಹಾಸನದ ವಡ್ಡರಹಳ್ಳಿ ಸೋಮಶೇಖರ್ ಹಾಗೂ ಬೆಂಗಳೂರಿನ ಎಂ.ಎಸ್.ಪಾಳ್ಯದ ಶಶಿಕಲಾ ಎಂಬುವರನ್ನು ನೆಲಮಂಗಲ ಆಸ್ಪತ್ರಗೆ ದಾಖಲಿಸಲಾಗಿದೆ. ಉಳಿದ ಗಾಯಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿದ್ದ ಚಾಲಕ ಈ ಬಗ್ಗೆ ಯಾವುದೇ ಸೂಚನೆ ನೀಡದೆ ಇರುವುದು ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಕುದೂರು ಪಿಎಸ್ಐ ನವೀನ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಗಾಯಗೂಂಡವರನ್ನು ನೆಲಮಂಗಲ, ಬೆಂಗಳೂರಿಗೆ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕಳುಹಿಸಿದರು. ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.