ADVERTISEMENT

ಅಂಗವಿಕಲರ ಆರೈಕೆದಾರರಿಂದ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 8 ಜುಲೈ 2025, 2:34 IST
Last Updated 8 ಜುಲೈ 2025, 2:34 IST

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯಿಂದ 2025-26ನೇ ಸಾಲಿಗೆ ಆಟಿಸಂ, ಬೌಧ್ದಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣದೋಷ/ದೃಷ್ಟಿದೋಷ) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ತಿಂಗಳಿಗೆ ₹1 ಸಾವಿರ ಪ್ರೋತ್ಸಾಹಧನದೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಅರ್ಜಿದಾರರು ಯು.ಡಿ.ಐ.ಡಿ ಕಾರ್ಡ್, ಸಕ್ಷಮ ಪ್ರಾಧಿಕಾರದಿಂದ ಪಡೆದ ಜಾತಿ ಪ್ರಮಾಣಪತ್ರ, ವಾಸಸ್ಥಳ ಪ್ರಮಾಣಪತ್ರ, ಆರೈಕೆದಾರರು ಹಾಗೂ ವಿಕಲಚೇತನರ ಜಂಟಿ ಭಾವಚಿತ್ರ ಹಾಗೂ ಆಧಾರ್ ಕಾರ್ಡ್‌ನೊಂದಿಗೆ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂಗಳನ್ನು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂಗಳು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಆರ್‌ಡಬ್ಲ್ಯೂ ಅವರಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕಿನ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಯು.ಆರ್.ಡಬ್ಲ್ಯೂ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ ಅಥವಾ ವಿವಿದೊದ್ದೇಶ ಪುನರ್ವಸತಿ ಕಾರ್ಯಕರ್ತರು ರಾಮನಗರ ದೂ: 9353194416, ಚನ್ನಪಟ್ಟಣ ದೂ: 8722480154, ಮಾಗಡಿ ತಾಲ್ಲೂಕು ದೂ: 9902303691 ಅಥವಾ ಕನಕಪುರ ಹಾಗೂ ಹಾರೋಹಳ್ಳಿ ತಾಲ್ಲೂಕು: 9986001574 ಸಂಪರ್ಕಿಸುವಂತೆ ಬೆಂಗಳೂರು ದಕ್ಷಿಣ ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.